

ಭೂಪಾಲ್ : ಮಧ್ಯಪ್ರದೇಶದ ನೂತನ ರಾಜ್ಯಪಾಲರಾಗಿ ಗುಜರಾತಿನ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಇಂದು ಅಧಿಕಾರ ಸ್ವೀಕರಿಸಿದರು.
ಭೂಪಾಲ್ ನ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಧ್ಯ.ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಹೇಮಂತ್ ಗುಪ್ತಾ ಪ್ರತಿಜ್ಞಾ ವಿಧಿ ಬೋಧಿಸಿದರು.
76 ವವರ್ಷದ ಆನಂದಿಬೆನ್ ಪಟೇಲ್ , ನರೇಂದ್ರಮೋದಿ ಪ್ರಧಾನಿಯಾದ ಬಳಿಕ ಗುಜರಾತಿನ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು.
2014ರಿಂದ 2016ರ ಆಗಸ್ಟ್ ವರೆಗೂ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ, ನಂತರ ಆ ಹುದ್ದೆಗೆ ಆನಂದಿಬೆನ್ ಪಟೇಲ್ ರಾಜೀನಾಮೆ ನೀಡಿದ್ದರು.