ಅನೈತಿಕ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳಾ ಪೊಲೀಸ್ ಅಧಿಕಾರಿ

ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಸರ್ಕಲ್ ಇನ್ಸ್ ಪೆಕ್ಟರ್ ಜತೆ ವಿವಾಹೇತರ ಅನೈತಿಕ ಸಂಬಂಧ ಹೊಂದಿದ್ದು, ಇಬ್ಬರೂ ಪೊಲೀಸ್ ಅಧಿಕಾರಿಗಳು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಹೈದರಾಬಾದ್: ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಸರ್ಕಲ್ ಇನ್ಸ್ ಪೆಕ್ಟರ್ ಜತೆ ವಿವಾಹೇತರ ಅನೈತಿಕ ಸಂಬಂಧ ಹೊಂದಿದ್ದು, ಇಬ್ಬರೂ ಪೊಲೀಸ್ ಅಧಿಕಾರಿಗಳು ಭಾನುವಾರ ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ  ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಲಂಡನ್ ನಲ್ಲಿ ಎನ್ಆರ್ ಐ ಉದ್ಯಮಿಯಾಗಿರುವ ಸುರೇಂದರ್ ರೆಡ್ಡಿ ಅವರ ಪತ್ನಿ ಸುನಿತಾ ರೆಡ್ಡಿ ಅವರು ಭ್ರಷ್ಟಾಚಾರ ನಿಗ್ರಹ ದಳದ ಸಹಾಯಕ ಪೊಲೀಸ್ ಅಧೀಕ್ಷಕಿಯಾಗಿದ್ದು, ಇಬ್ಬರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು.
ಈ ನಡುವೆ ಸರ್ಕಲ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ರೆಡ್ಡಿ ಅವರೊಂದಿಗೆ ತನ್ನ ಪತ್ನಿ ಸುನಿತಾ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಪತಿ ಸುರೇಂದರ್ ರೆಡ್ಡಿ ಆರೋಪಿಸಿದ್ದಾರೆ. ಅಲ್ಲದೆ ಇಂದು ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು, ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಮಲ್ಲಿಕಾರ್ಜುನ್ ರೆಡ್ಡಿಗೆ ಚಪ್ಪಲಿಯಿಂದ ಥಳಿಸಿದ್ದಾರೆ.
ಅನೈತಿಕ ಸಂಬಂಧ ಹೊಂದಿದ್ದ ಮಲ್ಲಿಕಾರ್ಜುನ್ ರೆಡ್ಡಿ ಅವರ ವಿರುದ್ಧ ಪೊಲೀಸರು ಕ್ರಿಮಿನಲ್ ಕೆಸ್ ದಾಖಲಿಸಿ, ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಮಲ್ಲಿಕಾರ್ಜುನ್ ರೆಡ್ಡಿ ಅವರು ಭಾನುವಾರ ರಾತ್ರಿ ಸುನಿತಾ ಅವರನ್ನು ಭೇಟಿ ಮಾಡಲು ಅವರ ಫ್ಲಾಟ್ ಗೆ ತೆರಳಿದ್ದರು. ಈ ವೇಳೆ ಸುರೇಂದರ್ ಮತ್ತು ಆತನ ಕುಟುಂಬ ಮನೆಗೆ ಭೇಟಿ ನೀಡಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ಆಕ್ಷೇಪಾರ್ಹ ಭಂಗಿಯಲ್ಲಿದ್ದರು. ಇದರಿಂದ ಆಕ್ರೋಶಗೊಂಡ ಸುರೇಂದರ್ ರೆಡ್ಡಿ ಕುಟುಂಬ ಸದಸ್ಯರನ್ನು ಮಲ್ಲಿಕಾರ್ಜುನ್ ರೆಡ್ಡಿಗೆ ಥಳಿಸಿದ್ದಾರೆ ಎಂದು ಕೆಪಿಎಚ್ ಬಿ ಇನ್ಸ್ ಪೆಕ್ಟರ್ ಸಿಎಚ್ ಕುಶಾಲ್ಕರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com