ನ್ಯಾಯಕ್ಕಾಗಿ ಪ್ರಧಾನಿ ಮೋದಿ, ಸಿಎಂ ಯೋಗಿಗೆ ರಕ್ತದಲ್ಲಿ ಪತ್ರ ಬರೆದ ಅತ್ಯಾಚಾರ ಸಂತ್ರಸ್ತೆ

ತನ್ನ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಅತ್ಯಾಚಾರ ಸಂತ್ರಸ್ತೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ರಾಯ್ ಬರೇಲಿ: ತನ್ನ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಅತ್ಯಾಚಾರ ಸಂತ್ರಸ್ತೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಂಗಳವಾರ ತನ್ನ ರಕ್ತದಲ್ಲಿ ಪತ್ರ ಬರೆದಿದ್ದಾಳೆ.
ಅತ್ಯಾಚಾರ ಆರೋಪಿಗಳು ಪ್ರಭಾವಿಗಳ ನಂಟು ಹೊಂದಿರುವುದರಿಂದ ಉತ್ತರ ಪ್ರದೇಶ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಮತ್ತು ಕೇಸ್ ಹಿಂಪಡೆಯುವಂತೆ ಆರೋಪಿಗಳು ತನ್ನ ಮೇಲೆ ಒತ್ತಡ ಹೇರುತ್ತಿರುವುದಾಗಿ ಯುವತಿ ಪತ್ರದಲ್ಲಿ ಆರೋಪಿಸಿದ್ದಾರೆ.
ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ನನಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಯುವತಿ ಜನವರಿ 20ರಂದು ಪ್ರಧಾನಿ ಮತ್ತು ಸಿಎಂಗೆ ಬರೆದ ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾಳೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಸಹಾಯಕ ಪೊಲೀಸ್ ಅಧೀಕ್ಷಕ ಶಶಿ ಶೇಖರ್ ಸಿಂಗ್ ಅವರು, ಬಾರಾಬಂಕಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಮಾರ್ಚ್ 24ರಂದು ಯುವತಿಯ ತಂದೆ ನೀಡಿದ ದೂರಿನದ ಆಧಾರದ ಮೇಲೆ ಆರೋಪಿಗಳಾದ ದಿವ್ಯ ಪಾಂಡೆ ಮತ್ತು ಅಂಕಿತ್ ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com