ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಈ ಬಗ್ಗೆ ಅವಿರೋಧ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆ ಬಳಿಕ ಮಾಧ್ಯಮಗಳೊಂದಿಗೆ ಈ ಬಗ್ಗೆ ಮಾತನಾಡಿದ ಪಕ್ಷದ ವಕ್ತಾರ ಸಂಜಯ್ ರಾವತ್ ಅವರು, 2019ರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆವನ್ನು ನಾವು ಏಕಾಂಗಿಯಾಗಿ ಎದುರಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದರು. ಅಲ್ಲದೆ ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು ಕಳೆದ ಮೂರು ವರ್ಷಗಳಿಂದ ಬಿಜೆಪಿ ಪಕ್ಷ ಸಿದ್ಧಾಂತಗಳ ವಿರುದ್ಧವಾಗಿ ನಡೆಯುತ್ತಿದೆ. ಹೀಗಾಗಿ ಪಕ್ಷ ಏಕಾಂಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಅವರು ಹೇಳಿದರು.