ಪ್ರತಾಪ್ಗರ್: 19 ವರ್ಷದ ಯುವತಿಯೊಬ್ಬಳನ್ನು ಕುಟುಂಬಸ್ಥರೆ ಸಜೀವ ದಹನ ಮಾಡಿರುವ ಘಟನೆ ಉತ್ತರಪ್ರದೇಶದ ಲಾಲ್'ಗಂಜ್ ಪ್ರದೇಶದಲ್ಲಿ ಸೋಮವಾರ ನಡೆದಿದೆ.
ಅಂಜು (19) ಸಜೀವ ದಹನಕ್ಕೊಳಗಾದ ಯುವತಿಯಾಗಿದ್ದಾಳೆ. ನಿನ್ನೆ ಮಧ್ಯಾಹ್ನ ಅಂಜು ತಂದೆ ಹಾಗೂ ಸಹೋದರ ಮನೆಗೆ ಬಂದಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆಯೇ ಯುವತಿಯ ಮೇಲೆ ಸೀಮೆಎಣ್ಣೆ ಸುರಿದು ಸಜೀವ ದಹನ ಮಾಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಘಟನೆ ವೇಳೆ ಯುವತಿ ಮನೆಯಲ್ಲಿ ಒಬ್ಬಳೇ ಇದ್ದಳು. ಯುವತಿಯ ಚೀರಾಟವನ್ನು ಕೇಳಿದ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾಳೆ.
ಪ್ರಸ್ತುತ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ಸಂಬಧ ಈವರೆಗೂ ಯಾರೊಬ್ಬರನ್ನೂ ಬಂಧನಕ್ಕೊಳಪಡಿಸಿಲ್ಲ.