ಇಂದು ಬೆಳಗ್ಗೆಯಷ್ಟೇ ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ತಪ್ಪಿತಸ್ಥ ಎಂದು ಸಿಬಿಐ ವಿಶೇಷ ನ್ಯಾಯಾಲಯ ಘೋಷಿಸಿತ್ತು. ಚಾಯಿಬಾಸಾ ಖಜಾನೆಯಲ್ಲಿ ರು.33.67 ಕೋಟಿ ಮೊತ್ತದ ವಂಚನೆ ಪ್ರಕರಣದ ಸಂಬಂಧ ಇಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಲಾಲು ಪ್ರಸಾದ್ ಮಾತ್ರವಲ್ಲದೇ ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರನ್ನು ಅಪರಾಧಿ ಎಂದು ಘೋಷಣೆ ಮಾಡಿರುವ ನ್ಯಾಯಾಲಯ ಅವರಿಗೂ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ ಇಬ್ಬರಿಗೂ ತಲಾ 10 ಲಕ್ಷ ರು.ಗಳ ದಂಡ ವಿಧಿಸಿದೆ.