ಅತ್ತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ವ್ಯಾಪಕ ಭದ್ರತೆ ಕಲ್ಪಿಸಲಾಗಿದ್ದು, ಪ್ರಮುಖವಾಗಿ ಅಂತಾರಾಷ್ಟ್ರೀಯ ಗಡಿಯಲ್ಲಿ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಸೈನಿಕ ಹತ್ಯೆಯಿಂದ ಇಂಡೋ-ಪಾಕ್ ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣ ನೆಲೆಸಿದ್ದು, ಇದೇ ಕಾರಣಕ್ಕೆ ಹೆಚ್ಚುವರಿ ಸೈನಿಕರನ್ನು ಗಡಿಯಲ್ಲಿ ಸರ್ವಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಇತ್ತ ರಾಜಧಾನಿ ಶ್ರೀನಗರದಲ್ಲಿ ಸಂಭಾವ್ಯ ಉಗ್ರ ದಾಳಿ ಹತ್ತಿಕ್ಕಲು ಸೇನಾಪಡೆಗಳು ಸಜ್ಜಾಗಿದ್ದು, ಶ್ರೀನಗರದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.