ದೆಹಲಿಯಲ್ಲಿ ಹಾಡಹಗಲೇ ಶಾಲಾ ಬಾಲಕನ ಅಪಹರಣ

ದೆಹಲಿಯಲ್ಲಿ ಹಾಡಹಗಲೇ ಶಾಲಾ ಬಾಲಕನೊಬ್ಬನ ಅಪಹರಣವಾಗಿದೆ. ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ.
ಬಾಲಕ ಅಪಹರಣಗೊಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು
ಬಾಲಕ ಅಪಹರಣಗೊಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು
Updated on: 

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಶಾಲಾ ಬಾಲಕನೊಬ್ಬನ ಅಪಹರಣವಾಗಿದೆ. ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ.

ಷಾದ್ರಾ ನಗರದ ಐಬಿಹೆಚ್ ಎಎಸ್ ಆಸ್ಪತ್ರೆ ಬಳಿ ಇಂದು ಬೆಳಿಗ್ಗೆ 8 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಶಾಲಾ ಬಸ್ಸನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು,ಬಸ್ಸಿನ ಚಾಲಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ವಿದ್ಯಾರ್ಥಿಯನ್ನು  ಅಪಹರಿಸಿ ಪರಾರಿಯಾಗಿದ್ದಾರೆ.

ಉತ್ತರ ಪ್ರದೇಶದ ಕಡೆಯಿಂದ ಕಪ್ಪು ಬಣ್ಣದ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾಲಕನನ್ನು ಅಪಹರಿಸಿದ್ದಾರೆ ಎಂದು ಪ್ರತ್ಯೇಕ್ಷದರ್ಶಿಗಳು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com