ಪದ್ಮಾವತ್ ವಿವಾದ: 4 ರಾಜ್ಯ, ಕರ್ಣಿ ಸೇನೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ 'ಸುಪ್ರೀಂ' ಒಪ್ಪಿಗೆ

ತೀವ್ರ ವಿರೋಧಕ್ಕೆ ಕಾರಣವಾಗಿರುವ ಪದ್ಮಾವತ್ ಚಿತ್ರ ಸಂಬಂಧ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ವ್ಯಾಪಕ ಪ್ರತಿಭಟನೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ತೀವ್ರ ವಿರೋಧಕ್ಕೆ ಕಾರಣವಾಗಿರುವ ಪದ್ಮಾವತ್ ಚಿತ್ರ ಸಂಬಂಧ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ಕರ್ಣಿಸೇನಾ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರಗಳ ವಿರುದ್ಧ ದಾಖಲಾಗಿರುವ ಒಟ್ಟು 2 ನ್ಯಾಯಾಂಗ ನಿಂದನೆ ಪ್ರಕರಣಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಪದ್ಮಾವತ್ ಚಿತ್ರ ಸಂಬಂಧ ಈ ಹಿಂದೆಯೇ ಸುಪ್ರೀಂ ಕೋರ್ಟ್ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದರ ಹೊರತಾಗಿಯೂ ನಡೆಯುತ್ತಿರುವ ಪ್ರತಿಭಟಗಳ ವಿರುದ್ಧ ಸರ್ವೋಚ್ಛ ನ್ಯಾಯಾಲಯ ತನ್ನ ಆಕ್ರೋಶ ವ್ಯಕ್ತಪಡಿಸಿದೆ.  ಪ್ರಮುಖವಾಗಿ ಮಿತಿ ಮೀರಿದ ಕರ್ಣಿ ಸೇನಾ ಪ್ರತಿಭಟನೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ರಾಜಸ್ಥಾನ, ಹರಿಯಾಣ, ಗುಜರಾತ್ ಮತ್ತು ಮಧ್ಯಪ್ರದೇಶ ಸರ್ಕಾರಗಳ ವಿರುದ್ಧ ಸುಪ್ರೀಂ ಕೋರ್ಟ್ ತನ್ನ  ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ದಾಖಲಾಗಿರುವ ನ್ಯಾಯಾಂದ ನಿಂದನೆ ಪ್ರಕರಣದ ವಿಚಾರಣೆಯನ್ನು ಸರ್ವೋಚ್ಥ ನ್ಯಾಯಾಲಯ ಇಂದು ನಡೆಸಲಿದೆ.
ಈ ಹಿಂದೆ ಕಾಂಗ್ರೆಸ್ ಮುಖಂಡ ಚೆಹ್ಸೀನ್ ಪೂನಾಲಾ ಅವರು ಕಳೆದ ಸೋಮವಾರ ಕರ್ಣಿ ಸೇನಾ ಹಾಗೂ ನಾಲ್ಕು ರಾಜ್ಯಗಳ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯ ಕುರಿತು  ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದೆ. ಅಲ್ಲದೆ ಪದ್ಮಾವತ್ ಚಿತ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕರ್ಣಿ ಸೇನಾ ಮತ್ತು ರಾಜಸ್ಥಾನ, ಹರಿಯಾಣ, ಗುಜರಾತ್  ಮತ್ತು ಮಧ್ಯಪ್ರದೇಶ ಸರ್ಕಾರಗಳ ವಿರುದ್ಧ ದಾಖಲಾಗಿರುವ ಅರ್ಜಿಗಳನ್ನೂ ಕೂಡ ವಿಚಾರಣೆಗೆ ತೆಗೆದುಕೊಳ್ಳಲಿದೆ.
ವಾರಣಾಸಿಯಲ್ಲಿ ವ್ಯಕ್ತಿಯಿಂದ ಆತ್ಮಾಹುತಿಗೆ ಯತ್ನ
ಏತನವ್ಮಧ್ಯೆ ಪದ್ಮಾವತ್ ಚಿತ್ರ ಪ್ರದರ್ಶನ ಮಾಡಬಾರದು ಎಂದು ಆಗ್ರಹಿಸಿ ವಾರಣಾಸಿಯಲ್ಲಿ ವ್ಯಕ್ತಿಯೋರ್ವ ಆತ್ಮಾಹುತಿಗೆ ಯತ್ನಿಸಿದ ಘಟನೆ ನಡೆದಿದೆ. ಪ್ರಸ್ತುತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನನ್ನು ಬಂಧಿಸಿ  ಜೈಲಿಗಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com