ಇನ್ನು ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅಸಿಯಾನ್ ನಾಯಕರು ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಗಣರಾಜ್ಯೋತ್ಸವ ಪಥ ಸಂಚಲನಕ್ಕಾಗಿ ರಾಜಧಾನಿ ದೆಹಲಿಯ ರಾಜಪಥ್ ಮಾರ್ಗ ಸಂಪೂರ್ಣವಾಗಿ ಸಜ್ಜಾಗಿದೆ. ಅಸಿಯಾನ್ ಒಕ್ಕೂಟದ ಹತ್ತು ದೇಶಗಳ ಮುಖ್ಯಸ್ಥರು ಪ್ರಸಕ್ತ ಸಾಲಿನ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳತ್ತಿದ್ದು, ಥೈಲ್ಯಾಂಡ್, ವಿಯೆಟ್ನಾಂ, ಇಂಡೋನೇಷ್ಯಾ, ಮಲೇಷ್ಯಾ, ಫಿಲಿಪ್ಪೀನ್ಸ್, ಸಿಂಗಾಪುರ, ಮಯನ್ಮಾರ್, ಕಾಂಬೋಡಿಯಾ, ಲಾವೋಸ್, ಬ್ರೂನೆ ದೇಶಗಳ ಪ್ರತಿನಿಧಿಗಳು ಭಾಗಿ ಭಾರತಕ್ಕೆ ಆಗಮಿಸಿದ್ದಾರೆ.