ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಮಹಿಳಾ ಆತ್ಮಹತ್ಯಾ ಬಾಂಬರ್ ನ್ನು ಬಂಧಿಸಲಾಗಿದ್ದು, ಆಕೆಯ ಸಹಚರರೊಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಪುಣೆಯ ಸಾಧಿಯಾ ಅನ್ವರ್ ಶೇಖ್ ಎಂದು ಗುರುತಿಸಲಾಗಿರುವುದಾಗಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮುನೀರ್ ಖಾನ್ ತಿಳಿಸಿದ್ದಾರೆ.
ಬಂಧಿತ ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್ ನ್ನು ವಿಚಾರಣೆಗೊಳಪಡಿಸಲಾಗಿದೆ. ಸ್ಥಳೀಯಳಲ್ಲದ, ಹೊರಗಿನ ಮಹಿಳೆಯೊಬ್ಬರು ಆತ್ಮಹತ್ಯಾ ಬಾಂಬರ್ ಕಾಶ್ಮೀರವನ್ನು ಪ್ರವೇಶಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು.