ಉತ್ತರ ಪ್ರದೇಶದ ಕಾಸ್ ಗಂಜ್‌ ನಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, 2 ಅಂಗಡಿಗೆ ಬೆಂಕಿ

ಕರ್ಫ್ಯೂ ನಡುವೆಯೂ ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ಶನಿವಾರ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ದುಷ್ಕರ್ಮಿಗಳು ಎರಡು ಅಂಗಡಿಗಳಿಗೆ....
ಕಾಸ್ ಗಂಜ್ ನಲ್ಲಿ ಮತ್ತೆ ಹಿಂಸಾಚಾರ
ಕಾಸ್ ಗಂಜ್ ನಲ್ಲಿ ಮತ್ತೆ ಹಿಂಸಾಚಾರ
ಲಖನೌ: ಕರ್ಫ್ಯೂ ನಡುವೆಯೂ ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ಶನಿವಾರ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ದುಷ್ಕರ್ಮಿಗಳು ಎರಡು ಅಂಗಡಿಗಳಿಗೆ ಮತ್ತು ಒಂದು ಬಸ್ ಗೆ ಬೆಂಕಿ ಹಚ್ಚಿದ್ದಾರೆ.
ಗಣರಾಜ್ಯೋತ್ಸವ ದಿನದಂದೇ ಭುಗಿಲೆದ್ದೆ ಹಿಂಸಾಚಾರದಲ್ಲಿ  22 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ನಿನ್ನೆ ಮಥುರಾ-ಬರೇಲಿ ಹೆದ್ದಾರಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಎಬಿವಿಪಿ ಕಾರ್ಯಕರ್ತರು ಮೆರವಣಿಗೆ ನಡೆಸುತ್ತಿದ್ದ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಚಂದನ್‌ಗುಪ್ತಾ ಎಂಬ ಯುವಕ ಮೃತಪಟ್ಟಿದ್ದರು. ಬಳಿಕ ಹಿಂಸಾಚಾರ ಭುಗಿಲೆದ್ದಿದ್ದು, ಹಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರದ ಬಳಿಕ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಈಗಲೂ ಉದ್ವಿಗ್ನ ಪರಿಸ್ಥಿತಿ ಇದೆ.
ನಿನ್ನೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಾವು ಒಂಬತ್ತು ಆರೋಪಿಗಳನ್ನು ಬಂಧಿಸಿದ್ದೇವೆ. ಈ ಸಂಬಂಧ ಕಾಸ್ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಶಾಂತಿ ಕಾಪಾಡಲು ಮನವಿ ಮಾಡಿದ್ದು, ಯಾರೇ ಆಗಲಿ ಹಿಂಸಾಚಾರದಲ್ಲಿ ಭಾಗಿಯಾದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಎಚ್ಚರ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com