ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ನಾಗರಿಕ ಮಿನಿ ಬಸ್ ವೊಂದು ನದಿ ಉರುಳಿಬಿದ್ದ ಪರಿಣಾಮ 13 ಮಂದಿ ದುರ್ಮರಣವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ...
ಕೊಲ್ಹಾಪುರ (ಮಹಾರಾಷ್ಟ್ರ): ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ನಾಗರಿಕ ಮಿನಿ ಬಸ್ ವೊಂದು ನದಿ ಉರುಳಿಬಿದ್ದ ಪರಿಣಾಮ 13 ಮಂದಿ ದುರ್ಮರಣವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಅಪಘಾತಕ್ಕೀಡಾದ ಬಸ್ ಕರಾವಳಿ ನಗರ ರತ್ನಗಿರಿಯಿಂದ ಕೊಲ್ಹಾಪುರಕ್ಕೆ ಚಲಿಸುತ್ತಿತ್ತು. ಬಸ್ ನಲ್ಲಿ ಒಟ್ಟು 15 ಜನರಿದ್ದರು. ಬಸ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿದೆ ಬಳಿಕ ತಡೆಗೋಡೆಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಪಂಚಗಂಗಾ ನದಿಗೆ ಉರುಳಿ ಬಿದ್ದಿದೆ.
ಘಟನೆಯಲ್ಲಿ 13 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.