ಮೇಘಾಲಯ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಈಶಾನ್ಯ ರಾಜ್ಯಗಳ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ಪಕ್ಷ ಭರದ ಸಿದ್ದತೆಯಲ್ಲಿ ತೊಡಗಿದೆ.
ಮುಕುಲ್ ಸಂಗ್ಮಾ
ಮುಕುಲ್ ಸಂಗ್ಮಾ
ನವದೆಹಲಿ: ಈಶಾನ್ಯ ರಾಜ್ಯಗಳ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ಪಕ್ಷ ಭರದ ಸಿದ್ದತೆಯಲ್ಲಿ ತೊಡಗಿದೆ. ಇಂದು ಮೇಘಾಲಯ ಚುನಾವಣೆಗಾಗಿ ತನ್ನ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪಕ್ಷ ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ ಪ್ರಸ್ತುತ ಮೇಘಾಲಯದ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಅವರ ಹೆಸರೂ ಸೇರಿದೆ. ಒಟ್ಟು 60 ಕ್ಷೇತ್ರದ ಪೈಕಿ 57 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಅಂಪಟಿ ಮತ್ತು ಸಾಂಡಕ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದೆ.
ಇದೇ ವೇಳೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ) ಮಾಜಿ ಶಾಸಕ ಮ್ಯಾರಥಾನ್ ಸಂಗ್ಮಾ ಮೆಂಡಿಪತಾರ್ ಕ್ಷೇತ್ರದಿಂದ ಸ್ಪರ್ಧಿಸುವಂತೆ  ಮತ್ತು ಸ್ವತಂತ್ರ ಶಾಸಕರಾಗಿದ್ದು ಇತ್ತೀಚೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರಿದ್ದ ಬ್ರಿಗಡಿ ಎನ್ ಮಾರಕ್ ಗೆ ಬೆಜೆಂಗ್ಡೊಬ. ಕ್ಷೇತ್ರದಿಂದ ಟಿಕೆಟ್ ನೀಡಿದೆ.
ಅರವತ್ತು ಸ್ಥಾನಗಳಿರುವ ಮೇಘಾಲಯ ವಿಧಾನಸಭೆ ಚುನಾವಣೆ ಮತದಾನವು ಫೆ..27ರಂದು ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com