ಕೆಲ ದಿನಗಳಿಂದ ಗಡಿಯಲ್ಲಿ ಪಾಕಿಸ್ತಾನ ಸೇನೆ ನಿರಂತರವಾಗಿ ಕದನ ವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಹೀಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಕಿಸ್ತಾನ ಸೇನೆ ಹೀಗೆಯೇ ಅಪ್ರಚೋದಿತ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದರೆ, ಗಡಿ ಭಾಗದ ಹಾಗೂ ಸೇನಾ ಶಿಬಿರಗಳ ಬಳಿಯಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತದೆ ಎಂದು ನೌಶೆಲಾ ಉಪವಿಭಾಗದ ಮ್ಯಾಜಿಸ್ಟ್ರೇಟ್ ಅಬ್ದುಲ್ ಸತ್ತಾರ್ ಅವರು ಹೇಳಿದ್ದಾರೆ.