ಚೆನ್ನೈ: ತಮಿಳುನಾಡಿನ ಟ್ಯುಟಿಕೋರಿನ್ ಜಿಲ್ಲೆಯಲ್ಲಿ ಎಐಎಡಿಎಂಕೆಯ 140 ಪದಾಧಿಕಾರಿಗಳನ್ನು ಉಚ್ಚಾಟನೆ ಮಾಡಲಾಗಿದೆ.
ಪಕ್ಷಕ್ಕೆ ಅಪಖ್ಯಾತಿ ತಂದ ಹಿನ್ನೆಲೆಯಲ್ಲಿ 140 ಪದಾಧಿಕಾರಿಗಳನ್ನು ಉಚ್ಚಾಟನೆ ಮಾಡಲಾಗಿದ್ದು, ಒ.ಪನ್ನೀರ್ ಸೆಲ್ವಂ ಹಾಗೂ ಪಳನಿಸ್ವಾಮಿ ಜಂಟಿ ಹೇಳಿಕೆಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿ ಪಕ್ಷಕ್ಕೆ ಅಪಖ್ಯಾತಿ ತಂದ ಹಿನ್ನೆಲೆಯಲ್ಲಿ ಪನ್ನೀರ್ ಸೆಲ್ವಂ ಹಾಗೂ ಪಳನಿಸ್ವಾಮಿ ಪಕ್ಷದ ಪದಾಧಿಕಾರಿಗಳ ವಿರುದ್ಧ ಉಚ್ಚಾಟನೆ ಮಾಡಲಾಗಿದ್ದು ಪದಾಧಿಕಾರಿಗಳೊಂದಿಗೆ ಯಾವುದೇ ಸಂಪರ್ಕ ಹೊಂದದಂತೆ ಪಕ್ಷದ ಕಾರ್ಯಕರ್ತರಿಗೆ ತಿಳಿಸಲಾಗಿದೆ.