ಉದ್ಯೋಗ ಸೃಷ್ಟಿ ಸಂಬಂಧ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಚಿದಂಬರಂ, ಉದ್ಯೋಗ ಸೃಷ್ಟಿ ಬಗ್ಗೆ ಕೇಂದ್ರ ಸರ್ಕಾರ ಸುಳ್ಳು ಅಂಕಿ ಅಂಶಗಳನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಚಿದಂಬರಂ ಅವರು, "ಪಕೋಡ ಮಾರುವುದು ಕೂಡಾ ಉದ್ಯೋಗ ಎನಿಸಿದರೆ, ಭಿಕ್ಷಾಟನೆಯನ್ನು ಕೂಡಾ ಉದ್ಯೋಗಾವಕಾಶ ಎಂದು ಪರಿಗಣಿಸಬೇಕಾಗುತ್ತದೆ. ಉದ್ಯೋಗಸೃಷ್ಟಿ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಯಾವ ಮಾಹಿತಿಯೂ ಇಲ್ಲ ಎಂದು ಆಪಾದಿಸಿರುವ ಅವರು ಈ ಸಂಬಂಧ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.