ಬಡ ಭಾರತೀಯರನ್ನು ಕಾಂಗ್ರೆಸ್ ಅವಮಾನಿಸಿದೆ: ಉದ್ಯೋಗದ ಬಗ್ಗೆ ಚಿದಂಬರಂ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ

ಪಕೋಡಾ ಮಾರುವುದು ಉದ್ಯೋಗವಾದರೆ, ಬಿಕ್ಷಾಟನೆ ಕೂಡ ಉದ್ಯೋಗವೇ ಎಂಬ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು ಈ ಹೇಳಿಕೆ ಮೂಲಕ ಕಾಂಗ್ರೆಸ್ ಬಡ ಭಾರತೀಯರನ್ನು...
ಚಿದಂಬರಂ
ಚಿದಂಬರಂ
Updated on: 
ನವದೆಹಲಿ: ಪಕೋಡಾ ಮಾರುವುದು ಉದ್ಯೋಗವಾದರೆ, ಬಿಕ್ಷಾಟನೆ ಕೂಡ ಉದ್ಯೋಗವೇ ಎಂಬ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು ಈ ಹೇಳಿಕೆ ಮೂಲಕ ಕಾಂಗ್ರೆಸ್ ಬಡ ಭಾರತೀಯರನ್ನು ಅವಮಾನಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 
ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಕೋಡ ಮಾರುವುದು ಕೂಡಾ ಉದ್ಯೋಗ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಪಕೋಡ ಮಾರುವುದು ಉದ್ಯೋಗವಾದರೆ ಭಿಕ್ಷಾಟನೆಯೂ ಉದ್ಯೋಗವೇ ಎಂದು ಅಭಿಪ್ರಾಯಪಟ್ಟಿದ್ದರು. 
ಚಿದಂಬರಂ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಪ್ರಧಾನಿ ನರೇಂದ್ರ ಮೋದಿ ಬಡ ಭಾರತೀಯರ ಶ್ರಮವನ್ನು ಗೌರವಿಸುತ್ತಿದ್ದಾರೆ, ಆದರೆ ಕಾಂಗ್ರೆಸ್ ಹಾಗೂ ಆ ಪಕ್ಷದ ನಾಯಕರು ಬಡ ಭಾರತೀಯರ ಬಗ್ಗೆ ಹಾಸ್ಯ ಮಾಡುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಬಡ ಜನರನ್ನು ಕೇವಲ ಮತಗಳ ದೃಷ್ಟಿಯಿಂದ ನೋಡುತ್ತಿತ್ತು, ಆದರೆ ಬಿಜೆಪಿ ಬಡವರ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡಿದೆ ಎಂದು ಜಾವ್ಡೇಕರ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com