ಜಮ್ಮು-ಕಾಶ್ಮೀರ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ...
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ನೌಶೆರಾ ಸೆಕ್ಟರ್ ಬಳಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದ್ದು, ಗಾಯಗೊಂಡಿರುವ ಯೋಧನನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ. ಪ್ರಸ್ತುತ ಗಡಿಯಲ್ಲಿ ಉಭಯ ಸೇನೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.