
ಉತ್ತರ ಪ್ರದೇಶ: ಕಾಸ್ ಗಂಜ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಉತ್ತರ ಪ್ರದೇಶಸರ್ಕಾರಕ್ಕೆ ಸೂಚನೆ ನೀಡಿದೆ.
ಗಣರಾಜ್ಯೋತ್ಸವ ದಿನದಂದು ಕಾಸ್ ಗಂಜ್ ನಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ಯುವಕನೋರ್ವ ಮೃತಪಟ್ಟಿದ್ದ. ಎರಡು ಬಸ್ಸು, ಕಾರು ಹಾಗೂ ಮೂರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.
ವಿಶ್ವ ಹಿಂದೂ ಪರಿಷತ್, ಹಿಂದೂ ಮಹಾಸಭಾ, ಮತ್ತು ಎಬಿವಿಪಿ ಸಹಯೋಗದಲ್ಲಿ ತಿರಾಂಗಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಗಲಭೆ ಭುಗಿಲೆದ್ದಿತ್ತು.ಯಾತ್ರೆ ಕೊಟ್ವಾಲಿ ಪ್ರದೇಶ ತಲುಪುತ್ತಿದ್ದಂತೆ ಕೆಲ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಗುಂಡಿನ ದಾಳಿಯಿಂದ ಗುಪ್ತಾ ಎಂಬಾತ ಸಾವನ್ನಪ್ಪಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಪ್ರಕರಣ ಸಂಬಂಧ 118 ಜನರನ್ನು ಬಂಧಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Advertisement