ಶಾಸಕರ ಅನರ್ಹತೆ ಹಿಂದಿನ ವಾಸ್ತವಾಂಶ ಬಗ್ಗೆ ಚುನಾವಣಾ ಆಯೋಗವನ್ನು ಕೇಳಿದ ದೆಹಲಿ ಹೈಕೋರ್ಟ್

ಲಾಭದಾಯಕ ಹುದ್ದೆ ಹೊಂದಿದ್ದ ಆರೋಪದ ಮೇಲೆ 20 ಮಂದಿ ಆಮ್ ಆದ್ಮಿ ...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ಲಾಭದಾಯಕ ಹುದ್ದೆ ಹೊಂದಿದ್ದ ಆರೋಪದ ಮೇಲೆ 20 ಮಂದಿ ಆಮ್ ಆದ್ಮಿ ಪಕ್ಷದ ಶಾಸಕರನ್ನು ಅನರ್ಹಗೊಳಿಸಿದ ಹಿಂದಿನ ವಾಸ್ತವ ಅಂಶವನ್ನು ಅಫಿಡವಿಟ್ಟಿನ ಮೂಲಕ ತಿಳಿಸುವಂತೆ ದೆಹಲಿ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ತಿಳಿಸಿದೆ.
ಹೈಕೋರ್ಟ್ ನ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನ ಮತ್ತು ಚಂದರ್ ಶೇಖರ್ ಅವರನ್ನೊಳಗೊಂಡ ನ್ಯಾಯಪೀಠ, ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿಯಲ್ಲಿ ಮಾಡಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಾಗಿ ಚುನಾವಣಾ ಆಯೋಗ ಹೇಳಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಅವಕಾಶ ನೀಡಿದೆ.
ಆಪ್ ನ 20 ಮಂದಿ ಶಾಸಕರು ಸಂಸದೀಯ ಕಾರ್ಯದರ್ಶಿಗಳ ಹುದ್ದೆ ಹೊಂದಿರುವುದರಿಂದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ಆಯೋಗದ ತೀರ್ಮಾನಕ್ಕೆ ರಾಷ್ಟ್ರಪತಿ ಒಪ್ಪಿಗೆ ಸೂಚಿಸಿರುವುದರಿಂದ ತನ್ನ ಅಭಿಪ್ರಾಯಕ್ಕೆ ಬದ್ಧವಾಗಿದೆ ಎಂದು ಆಯೋಗ ಹೇಳಿದೆ.
ದೀರ್ಘ ವಿಚಾರಣೆ ನಂತರ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿದೆ. ಆ ಸಂದರ್ಭದಲ್ಲಿ ಅನರ್ಹಗೊಂಡ ಶಾಸಕರು ಚುನಾವಣಾ ಆಯೋಗಕ್ಕೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಬೇಕು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com