ಉತ್ತರ ಪ್ರದೇಶದ ಸಚಿವ ಓಂ ಪ್ರಕಾಶ್ ರಾಜ್ ಭರ್ ಈ ಹೇಳಿಕೆ ನೀದಿದ್ದು, ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಮಿತ್ರ ಪಕ್ಷ ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥರಾಗಿರುವ ರಾಜ್ ಭರ್, ಈಗಿನ ಸರ್ಕಾರ ತಮ್ಮ ಪಕ್ಷಕ್ಕೆ ಮಾನ್ಯತೆ ನೀಡುತ್ತಿಲ್ಲ, ಈ ಹಿಂದಿನ ಬಿಎಸ್ ಪಿ, ಎಸ್ ಪಿ ಆಡಳಿತಕ್ಕಿಂತ ಹೆಚ್ಚು ಭ್ರಷ್ಟಾಚಾರ ಈಗಿನ ಸರ್ಕಾರದಲ್ಲಿ ನಡೆಯುತ್ತಿದೆ, ನಾನು ಈ ಸರ್ಕಾರದ ಭಾಗವಾಗಿದ್ದೇನೆ, ಆದರೆ ಈ ಸರ್ಕಾರ ನನ್ನದಲ್ಲ ಎಂದು ಹೇಳಿದ್ದಾರೆ.