ಕಳೆದ ಜನವರಿ 12ರಂದು ಸುಪ್ರೀಂ ಕೋರ್ಟ್‌ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳಾದ ಜೆ. ಚಲಮೇಶ್ವರ್. ರಂಜನ್ ಗೊಗೋಯ್, ಮದನ್ ಬಿ.ಲೋಕೂರ್ ಮತ್ತು ಕುರಿಯನ್ ಜೋಸೆಫ್ ಪತ್ರಿಕಾಗೋಷ್ಠಿ ನಡೆಸಿ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಯಾವ ಯಾವ ಪ್ರಕರಣಗಳನ್ನು ಯಾರಿಗೆ ವಹಿಸಬೇಕು ಎಂಬ ಬಗ್ಗೆ ಹೊಸ ರೋಸ್ಟರ್ ವ್ಯವಸ್ಥೆ ಜಾರಿಗೆ ತರಲಾಗಿದೆ ಮತ್ತು ಅದನ್ನು ಸಾರ್ವಜನಿಕವಾಗಿ ವೆಬ್ ಸೈಟ್ ನಲ್ಲಿ ಪ್ರಕಟಿಸುವ ನಿರ್ಧಾರಕ್ಕೆ ಬರಲಾಗಿದೆ.