ದುಲೆ: ಕೆಲ ದಿನಗಳ ಹಿಂದೆ ಕರ್ನಾಟಕದಲ್ಲಿ ಆತಂಕಕ್ಕೆ ಕಾರಣವಾಗಿದ್ದ ಮಕ್ಕಳ ಕಳ್ಳರ ವದಂತಿ ಮಹಾರಾಷ್ಟ್ರದಲ್ಲಿ ವ್ಯಾಪಿಸಿದ್ದು, ಐವರು ಅಮಾಯಕರು ಬಲಿಯಾಗಿದ್ದಾರೆ. ದುಲೆ ಜಿಲ್ಲೆಯ ಗ್ರಾಮವೊಂದರಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಐವರು ಅಮಾಯಕರನ್ನು ಗ್ರಾಮಸ್ಥರು ಸೇರಿ ಮನಬಂದಂತೆ ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.