ಆಧಾರ್-ಪ್ಯಾನ್ ಕಾರ್ಡ್ ಜೋಡಣೆ: 2019 ಮಾರ್ಚ್ 31 ವರೆಗೂ ಅಂತಿಮ ಗಡುವು ವಿಸ್ತರಣೆ

ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಗಳ ಜೋಡಣೆಗೆ ವಿಧಿಸಲಾಗಿದ್ದ ಅಂತಿಮ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಗಳ ಜೋಡಣೆಗೆ ವಿಧಿಸಲಾಗಿದ್ದ ಅಂತಿಮ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ.
ಶನಿವಾರ ತಡರಾತ್ರಿ ಕೇಂದ್ರ ಸರ್ಕಾರ ಇಂತಹುದೊಂದು ನಿರ್ಧಾರ ಕೈಗೊಂಡಿದ್ದು, ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ನೀಡಲಾಗಿದ್ದ ಅಂತಿಮ ಗಡುವನ್ನು 2019ರ ಮಾರ್ಚ್ 31ಕ್ಕೆ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ನಾಲ್ಕು ಬಾರಿ ಕೇಂದ್ರ ಸರ್ಕಾರ ಅಂತಿಮ ಗಡುವನ್ನು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಐದನೇ ಬಾರಿಗೆ ಮತ್ತೆ ಅಂತಿಮ ಗಡುವನ್ನು ವಿಸ್ತರಣೆ ಮಾಡಿದೆ.
ಈ ಬಗ್ಗೆ ನಿನ್ನೆ ರಾತ್ರಿ ಕೇಂದ್ರೀಯ ನೇರ ತೆರಿಗೆಗಳ ಇಲಾಖೆ ನಿರ್ಧಾರ ಕೈಗೊಂಡಿದ್ದು, ತೆರಿಗೆ ಕಾಯ್ದೆ ಸೆಕ್ಷನ್ 119ರ ಅಡಿಯಲ್ಲಿ ಆಧಾರ್ ಸಂಖ್ಯೆ ಮತ್ತು ಪ್ಯಾನ್ ಕಾರ್ಡ್ ನೊಂದಿಗೆ ಜೋಡಣೆ ಮಾಡುವ ಅಂತಿಮ ಗಡುವನ್ನು 2019 ಮಾರ್ಚ್ 31ಕ್ಕೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಬಿಡಿಟಿ ಸುಪ್ರೀಂ ಕೋರ್ಟ್ ಆದೇಶದಂತೆ ಅಂತಿಮ ಗಡುವು ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದೆ.
ಇನ್ನು ಈ ಹಿಂದೆ ಆಧಾರ್ ಕಾರ್ಡ್ ಅಸ್ತಿತ್ವವನ್ನೇ ಪ್ರಶ್ನಿಸಿ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮಾಡಿದ್ದ ಸುಪ್ರೀಂ ಕೋರ್ಟ್ ಆಧಾರ್-ಪ್ಯಾನ್ ಜೋಡಣೆಗೆ ನೀಡಲಾಗಿದ್ದ ಅಂತಿಮ ಗಡುವನ್ನು ವಿಸ್ತರಣೆ ಮಾಡುವಂತೆ ಕೇಂದ್ರೀಯ ನೇರತೆರಿಗೆಗಳ ಇಲಾಖೆಗೆ ಸೂಚನೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com