ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚೆ ನಡೆಸಿ, ಸುಪ್ರೀಂ ಆದೇಶದಂತ ಕರ್ನಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ. ಹೀಗಾಗಿ ಕೇಂದ್ರ ಜಲ ಆಯೋಗದಿಂದ ಅಂಕಿ-ಅಂಶ ಪಡೆದು ನೀರನ್ನು ಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಕರ್ನಾಟಕ ತಿಳಿಸಿದೆ.