ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ, ಎಲ್ಲಾ ಪಕ್ಷಗಳು ಒಗ್ಗೂಡುವಂತೆ ಕೇಜ್ರಿವಾಲ್ ಒತ್ತಾಯ

ರಾಷ್ಟ್ರ ರಾಜಧಾನಿ ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ.
ಕೇಜ್ರಿವಾಲ್
ಕೇಜ್ರಿವಾಲ್
Updated on: 

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡುವಂತೆ  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ. ಇದಕ್ಕಾಗಿ ನಗರದಾದ್ಯಂತ ಪ್ರಚಾಂದೋಲನ ನಡೆಸುವುದಾಗಿ ಅವರು ಹೇಳಿದ್ದಾರೆ.

ಇದು ಕೇವಲ ಆಮ್ ಆದ್ಮಿ ಪಕ್ಷದ ಹೋರಾಟವಲ್ಲಾ, ಈ ಬೇಡಿಕೆ ಈಡೇರಿಕೆಗೆ ಎಲ್ಲಾ ಪಕ್ಷಗಳು  ಒಗ್ಗೂಡಬೇಕು. ದೆಹಲಿಗೆ ಸಂಪೂರ್ಣ ರಾಜ್ಯಸ್ಥಾನಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳ ಸಹಾಯ ಪಡೆಯಲು ಶೀಘ್ರದಲ್ಲಿ ಸರ್ವ ಪಕ್ಷ ಸಭೆಯನ್ನು ಕರೆಯುವುದಾಗಿ ಅವರು ಪಕ್ಷದ  ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನ ನೀಡುವುದಾಗಿ ಪ್ರಧಾನಿ ನರೇಂದ್ರಮೋದಿ ಈ ಹಿಂದೆ ನೀಡಿದ್ದ ಹೇಳಿಕೆಯನ್ನು ನೆನಪು ಮಾಡಿಕೊಳ್ಳಬೇಕು. ಒಂದು ವೇಳೆ  ಮಾತಿಗೆ ತಪ್ಪಿದ್ದರೆ  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ  ಒಂದು ಸ್ಥಾನವನ್ನು ಗೆಲ್ಲುವುದಿಲ್ಲ ಎಂದು  ಕೇಜ್ರಿವಾಲ್ ಹೇಳಿದರು.

ಒಂದು ಬಾರಿ  ದೆಹಲಿ ಸಂಪೂರ್ಣ ರಾಜ್ಯ ಸ್ಥಾನ ಪಡೆದರೆ ಅಭಿವೃದ್ದಿ ಕಾರ್ಯಗಳು ತ್ವರಿತಗತಿಯಲ್ಲಿ ಆಗಲಿವೆ ಎಂದು ಅವರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com