ಎಲ್ಲಾ ಪ್ರಾದೇಶಿಕ ಪಕ್ಷಗಳೂ ಸ್ವೀಕರಿಸುವ ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್ ಇನ್ನೂ ಅಸ್ತಿತ್ವದಲ್ಲಿದ್ದು, ಕಾಂಗ್ರೆಸ್ ಇಲ್ಲದೇ ವಿರೋಧಪಕ್ಷಗಳಲ್ಲಿ ಒಗ್ಗಟ್ಟು ಮೂಡುವುದಕ್ಕೆ ಸಾಧ್ಯವಿಲ್ಲ ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ. 2019 ರ ಲೋಕಸಭಾ ಚುನಾವಣೆಗಾಗಿ ವಿರೋಧಪಕ್ಷಗಳು ಒಗ್ಗಟ್ಟು ಪ್ರದರ್ಶನಕ್ಕಾಗಿ ಯತ್ನಿಸಿರುವುದರ ಬಗ್ಗೆ ಶಿವಸೇನೆ ಸಾಮ್ನಾದಲ್ಲಿ ಲೇಖನ ಪ್ರಕಟಿಸಿದ್ದು, ಪ್ರಾದೇಶಿಕ ಪಕ್ಷಗಳ ಒಗ್ಗಟ್ಟಿಗೆ ಕಾಂಗ್ರೆಸ್ ಅತ್ಯಗತ್ಯ ಎಂದು ಹೇಳಿದೆ.