ಬಹುಪತ್ನಿತ್ವ, ನಿಖಾ ಹಲಾಲ ಪ್ರಕರಣಗಳ ತ್ವರಿತ ವಿಚಾರಣೆ ಇಲ್ಲ: ಸುಪ್ರೀಂ ಕೋರ್ಟ್

ಬಹುಪತ್ನಿತ್ವ ಹಾಗೂ ನಿಖಾ ಹಲಾಲ ಪ್ರಕರಣಗಳ ತ್ವರಿತ ವಿಚಾರಣೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಬಹುಪತ್ನಿತ್ವ ಹಾಗೂ ನಿಖಾ ಹಲಾಲ ಪ್ರಕರಣಗಳ ತ್ವರಿತ ವಿಚಾರಣೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. 
ಮುಸ್ಲಿಮ್ ಸಮುದಾಯದಲ್ಲಿರುವ ಬಹುಪತ್ನಿತ್ವ ಹಾಗೂ ನಿಖಾ ಹಲಾಲ ನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತ್ವರಿತ ವಿಚಾರಣೆ ನಡೆಸಲು ನಿರಾಕರಿಸಿರುವ ಮುಖ್ಯ ನ್ಯಾ. ದೀಪಕ್ ಮಿಶ್ರಾ, ಎಎಂ ಖನ್ವಾಲಿಕರ್ ಹಾಗೂ ನ್ಯಾ.ಡಿ ವೈ ಚಂದ್ರಚೂಡ್,  ನೇತೃತ್ವದ ಪೀಠ, ಕೇಂದ್ರ ಸರಕರ ಪ್ರತಿಕ್ರಿಯೆ ನೀಡಿದ ಬಳಿಕ ಮುಂದಿನ ವಿಚಾರಣೆ ನಡೆಸುವುದಾಗಿ ಹೇಳಿದೆ. 
ಸಮುದಾಯದಲ್ಲಿರುವ ಬಹುಪತ್ನಿತ್ವ ಹಾಗೂ ನಿಖಾ ಹಲಾಲ ನ್ನು ಕೋರ್ಟ್ ನಲ್ಲಿ ಪ್ರಶ್ನಿಸಿದ್ದಕ್ಕಾಗಿ ತಮಗೆ ಬೆದರಿಕೆ ಬರುತ್ತಿವೆ, ಈ ಹಿನ್ನೆಲೆಯಲ್ಲಿ ತ್ವರಿತ ವಿಚಾರಣೆ ನಡೆಸಬೇಕೆಂದು ಸಮೀನಾ ಬೇಗಂ ಕೋರ್ಟ್ ಮೊರೆ ಹೋಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com