ರಾಜಕೀಯ ಪಕ್ಷಗಳಿಗೆ ಕಾನೂನುಬದ್ಧ ವಿದೇಶಿ ದೇಣಿಗೆ , ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್
ವಿದೇಶಿ ದೇಣಿಗೆ (ನಿಯಂತ್ರಣ ) ತಿದ್ದುಪಡಿ ಕಾಯ್ದೆ ಕುರಿತಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ನವದೆಹಲಿ: ವಿದೇಶಿ ದೇಣಿಗೆ (ನಿಯಂತ್ರಣ ) ತಿದ್ದುಪಡಿ ಕಾಯ್ದೆ ಕುರಿತಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
2016ರ ಹಣಕಾಸು ಕಾಯ್ದೆಯ ಸೆಕ್ಷನ್ 236 ಮತ್ತು 2018ರ ಹಣಕಾಸು ಕಾಯ್ದೆಯ 217ರ ಪರಿಚ್ಚೇದವು ಅನೂರ್ಜಿತ, ಕಾನೂನುಬಾಹಿರ ಮತ್ತು ಅಸಂವಿಧಾನಿಕ ಎಂದು ಘೋಷಣೆ ಮಾಡುವಂತೆ ಸುಪ್ರೀಂಕೋರ್ಟಿಗೆ ಸಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಾಧೀಶರಾದ ಎ. ಎಂ. ಖಾನ್ವಿಲ್ಕರ್ ಹಾಗೂ ಡಿ. ವೈ. ಚಂದ್ರಚೂಡ್ ಅವರಿದ್ದ ತ್ರಿಸದಸ್ಯ ಪೀಠ ಕೇಂದ್ರಸರ್ಕಾರಕ್ಕೆ ಪ್ರತಿಕ್ರಿಯೆನೀಡುವಂತೆ ಆದೇಶಿಸಿದೆ.
ಸಾಗರೋತ್ತರ ಕಂಪನಿಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ದೇಣಿಗೆ ಪಡೆಯುವುದು ತಪ್ಪಾಗಿದ್ದು, ಜಾಮೀನಿಗೆ ಅವಕಾಶ ಇಲ್ಲ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದ್ದ ನಂತರ ತಿದ್ದುಪಡಿ ತರಲಾಗಿತ್ತು. ದೆಹಲಿ ನ್ಯಾಯಾಲಯದ ತೀರ್ಪನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಉನ್ನತ ನ್ಯಾಯಾಲಯ ವಜಾಗೊಳಿಸಿತ್ತು ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.