ಕಾವೇರಿ ಪ್ರಾಧಿಕಾರದ ನಿರ್ಧಾರ ತಮಿಳುನಾಡು ಪರವಾಗಿದೆ: ಸಿಎಂ ಪಳನಿಸ್ವಾಮಿ

ಕಾವೇರಿ ನದಿ ನೀರು ಪ್ರಾಧಿಕಾರದ ನಿರ್ಧಾರ ಉತ್ತಮವಾಗಿದೆ ಮತ್ತು ತಮಿಳುನಾಡು ಪರವಾಗಿದೆ ಎಂದು ತಮಿಳುನಾಡು...
ಇಕೆ ಪಳನಿಸ್ವಾಮಿ
ಇಕೆ ಪಳನಿಸ್ವಾಮಿ
ಚೆನ್ನೈ: ಕಾವೇರಿ ನದಿ ನೀರು ಪ್ರಾಧಿಕಾರದ ನಿರ್ಧಾರ ಉತ್ತಮವಾಗಿದೆ ಮತ್ತು ತಮಿಳುನಾಡು ಪರವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದ್ದಾರೆ. 
ಇಂದು ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ಪ್ರಾಧಿಕಾರದ ಮೊದಲ ಸಭೆಯಲ್ಲಿ, ಸುಪ್ರೀಂ ಕೋರ್ಟ್‌ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.
ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ದುರೈಮುರಗನ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಪಳನಿಸ್ವಾಮಿ, ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಎಸ್‌. ಮಸೂದ್‌ ಹುಸೇನ್‌ ನೇತೃತ್ವದಲ್ಲಿ ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆಯ ನಂತರ 31.24 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ ಎಂದರು.
ಪ್ರಾಧಿಕಾರದ ಅಧ್ಯಕ್ಷರು ಐತಿಹಾಸಿ ನಿರ್ಧಾರ ತೆಗೆದುಕೊಂಡಿದ್ದು, ಇನ್ನುಮುಂದೆ ನೀರು ಹಂಚಿಕೆಯ ಹೊಸ ಯುಗ ಆರಂಭವಾಗಲಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com