ಇದೇ ವೇಳೆ ಹಲ್ಲೆಯ ಸಂತ್ರಸ್ತರನ್ನು ನಿರ್ದಿಷ್ಟ ಧರ್ಮ, ಜಾತಿಗೆ ತಳುಕುಹಾಕುವುದೂ ಸಹ ತಪ್ಪು ಎಂದು ಎಚ್ಚರಿಸಿರುವ ಸುಪ್ರೀಂ ಕೋರ್ಟ್, ಸಂತ್ರಸ್ತ ಸಂತ್ರನಷ್ಟೇ, ಆತನನ್ನು ಯಾವುದೇ ಧರ್ಮ, ಜಾತಿಯ ಆಧಾರದಲ್ಲಿ ಗುರುತಿಸುವುದು ಸರಿಯಲ್ಲ ಎಂದಿದೆ. ಯಾರೂ ಸಹ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ಗೋ ರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಲ್ಲೆಗಳ ಬಗ್ಗೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಹೇಳಿದ್ದಾರೆ. ಸಂತ್ರಸ್ತರಿಗೆ ಪರಿಹಾರ ನೀಡುವುದಕ್ಕೆ ಸಂಬಂಧಿಸಿದ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ.