ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಟ್ರೋಲ್ ಮಾಡುತ್ತಿರುವುದು ತಪ್ಪು: ರಾಜನಾಥ್ ಸಿಂಗ್

ಸರ್ಕಾರಿ ಪ್ರತಿನಿಧಿಯೊಬ್ಬರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿರುವುದನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ತೀವ್ರವಾಗಿ ಖಂಡಿಸಿದ್ದಾರೆ...
ಗೃಹ ಸಚಿವ ರಾಜನಾಥ ಸಿಂಗ್ ಮತ್ತು ಸುಷ್ಮಾ ಸ್ವರಾಜ್
ಗೃಹ ಸಚಿವ ರಾಜನಾಥ ಸಿಂಗ್ ಮತ್ತು ಸುಷ್ಮಾ ಸ್ವರಾಜ್
ನವದೆಹಲಿ; ಸರ್ಕಾರಿ ಪ್ರತಿನಿಧಿಯೊಬ್ಬರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿರುವುದನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ತೀವ್ರವಾಗಿ ಖಂಡಿಸಿದ್ದಾರೆ. 
ಹಿಂದೂ-ಮುಸ್ಲಿಂ ದಂಪತಿಗಳಿಗೆ ಪಾಸ್'ಪೋರ್ಟ್ ನೀಡಿದ್ದ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡಿದ್ದಕ್ಕೆ ಸಚಿವೆ ಸುಷ್ಮಾ ಸ್ರರಾಜ್ ಅವರನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ರೋಲ್ ಮಾಡಲಾಗಿತ್ತು. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಜನಾಥ್ ಸಿಂಗ್ ಅವರು, ಸಂಪುಟ ಸಚಿವರನ್ನು ಟ್ರೋಲ್ ಮಾಡುತ್ತಿರುವುದು ನಿಜಕ್ಕೂ ಸರಿಯಲ್ಲ, ಇದನ್ನು ಖಂಡಿಸುತ್ತೇನೆಂದು ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಹಿಂದೂ-ಮುಸ್ಲಿಂ ದಂಪತಿಗೆ ಅಧಿಕಾರಿಯೊಬ್ಬರು ಪಾಸ್'ಪೋರ್ಟ್ ನಿರಾಕರಿಸಿದ್ದರಲ್ಲದೆ, ದಂಪತಿಗಳಿಗೆ ಅವಮಾನ ಮಾಡಿದ್ದರು. ಈ ಪ್ರಕರಣ ಭಾರೀ ಸುದ್ದಿಗೆ ಗ್ರಾಸವಾಗಿತ್ತು. ಬಳಿಕ ಅಧಿಕಾರಿವಿರುದ್ಧ ಕ್ರಮಕೈಗೊಂಡಿದ್ದ ಸುಷ್ಮಾ ಸ್ವರಾಜ್ ಅವರು ಅಧಿಕಾರಿಯನ್ನು ವರ್ಗಾವಣೆ ಮಾಡಿ, ಹಿಂದೂ-ಮುಸ್ಲಿಂ ದಂಪತಿಗೆ ಪಾಸ್'ಪೋರ್ಟ್ ನೀಡಿದ್ದರು. 
ಈ ಘಟನೆಗೆ ಸುಷ್ಮಾ ಸ್ವರಾಜ್ ವಿರುದ್ಧ ಹಲವರು ಟೀಕೆಗಳನ್ನು ಮಾಡಿದ್ದರು. ಅಲ್ಲದೆ, ಕೆಟ್ಟ ಪದಗಳಿಂದ ನಿಂದಿಸಿದ್ದರು. ಅಧಿಕಾರಿ ತಮ್ಮ ಕರ್ತವ್ಯವನ್ನು ಮಾಡಿದ್ದು, ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದರು. ಇದರಂತೆ ಸುಷ್ಮಾ ಸ್ವರಾಜ್ ಅವರನ್ನು ಟ್ರೋಲ್ ಮಾಡಲು ಆರಂಭಿಸಿದ್ದರು. 
ಬಳಿಕ ಟ್ರೋಲ್ ಆಗುತ್ತಿರುವ ಕುರಿತಂತೆ ಟ್ವಿಟರ್ ನಲ್ಲಿ ಪೋಲ್ ವೊಂದರಲ್ಲಿ ಸುಷ್ಮಾ ಅವರು ಜನರ ಅಭಿಪ್ರಾಯವನ್ನು ಕೇಳಿದ್ದರು. ಅದರಲ್ಲಿ ಶೇ.43ರಷ್ಟು ಜನರು ನಿಂದನೀಯ ಟ್ವೀಟ್ ಗಳನ್ನು ಸಮರ್ಥಿಸಿಕೊಂಡಿದ್ದರೆ, ಶೇ.57ರಷ್ಟು ಜನರು ಸರಿಯಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು. 
ಶೇ.43ರಷ್ಟು ಮಂದಿ ನಿಂದನೀಯ ಟ್ವೀಟ್ ಸಮರ್ಥಿಸಿಕೊಂಜಿರುವುದನ್ನು ಒಮರ್ ಅಬ್ದುಲ್ಲಾ ಅವರು ಖಂಡಿಸಿದ್ದರಲ್ಲದೆ, ನಿಂದನೀಯ ಟ್ವೀಟ್'ಗಳನ್ನು ಸಮರ್ಥಿಸಿಕೊಳ್ಳುತ್ತಿರುವ ಜನರಿಗೆ ನಾಚಿಕೆಯಾಗಬೇಕೆಂದು ಸುಷ್ಮಾ ಸ್ವರಾಜ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com