ಅಫ್ಘಾನಿಸ್ತಾನದಲ್ಲಿ ಸಿಕ್ಖ್, ಹಿಂದೂಗಳ ಮೇಲೆ ದಾಳಿ: ಹೊಣೆಹೊತ್ತ ಇಸಿಸ್ ಉಗ್ರರು

ಅಫ್ಘಾನಿಸ್ತಾನದ ಜಲಾಲಾಬಾದ್ ರಾಜ್ಯಪಾಲರ ನಿವಾಸಕ್ಕೆ ಆಗಮಿಸಿದ್ದ ಅಧ್ಯಕ್ಷ ಅಶ್ರಫ್ ಘನಿ ಅವರನ್ನು ಭೇಟಿಯಾಗಲು ತೆರಳುತ್ತಿದ್ದ ಹಿಂದೂ ಮತ್ತು ಸಿಖ್ಖರನ್ನು ಗುರಿಯಾಗಿರಿಸಿ ನಡೆಸಲಾದ ಆತ್ಮಾಹುತಿ ದಾಳಿಯ ಹೊಣೆಯನ್ನು ಇಸ್ಲಾಮಿಕ್...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ; ಅಫ್ಘಾನಿಸ್ತಾನದ ಜಲಾಲಾಬಾದ್ ರಾಜ್ಯಪಾಲರ ನಿವಾಸಕ್ಕೆ ಆಗಮಿಸಿದ್ದ ಅಧ್ಯಕ್ಷ ಅಶ್ರಫ್ ಘನಿ ಅವರನ್ನು ಭೇಟಿಯಾಗಲು ತೆರಳುತ್ತಿದ್ದ ಹಿಂದೂ ಮತ್ತು ಸಿಖ್ಖರನ್ನು ಗುರಿಯಾಗಿರಿಸಿ ನಡೆಸಲಾದ ಆತ್ಮಾಹುತಿ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ ಉಗ್ರ ಸಂಘಟನೆ ಮಂಗಳವಾರ ಹೊತ್ತುಕೊಂಡಿದೆ. 
ದಾಳಿ ಕುರಿತಂತೆ ಇಂದು ಹೇಳಿಕೆ ಬಿಡುಗಡೆ ಮಾಡಿರುವ ಇಸಿಸ್ ಉಗ್ರರು, ದಾಳಿ ನಡೆಸಿದ್ದು ನಾವೇ ಎಂದು ಹೇಳಿಕೊಂಡಿದ್ದಾರೆ. 
ಭಾನುವಾರವಷ್ಟೇ ಅಫ್ಘಾನಿಸ್ತಾನದ ಜಲಾಲಾಬಾದ್ ನಲ್ಲಿ ಆತ್ಮಾಹುತಿ ದಾಳಿ ನಡೆಸಿದ್ದ ಉಗ್ರರು 19 ಮಂದಿಯನ್ನು ಬಲಿಪಡೆದುಕೊಂಡಿದ್ದರು. 
19 ಮಂದಿ ಮೃತರಲ್ಲಿ 17 ಮಂದಿ ಅಲ್ಪಸಂಖ್ಯಾತ ಹಿಂದೂ ಮತ್ತು ಸಿಖ್ಖ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರೂ ಕೂಡ ಹಿಂದೂ ಮತ್ತು ಸಿಖ್ಖ್ ಸಮುದಾಯದವರೆಂದು ಹೇಳಲಾಗುತ್ತಿದೆ. 
ಅಕ್ಟೋಬರ್ ತಿಂಗಳಿನಲ್ಲಿ ನಡೆಯಿಲಿದ್ದ ಸಂಸತ್ ಚುನಾವಣೆಯಲ್ಲಿ ಭಾಗವಹಿಸುವ ಯೋಜನೆ ಹೊಂದಿದ್ದ ಹಿರಿಯ ಸಿಖ್ ಮುಖಂಡ ಅವತಾರ್ ಸಿಂಗ್ ಖಲ್ಸ ಅವರು ಕೂಡ ದಾಳಿಯಲ್ಲಿ ಬಲಿಯಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com