ಎಐಸಿಸಿ ಸಾಮಾಜಿಕ ಜಾಲತಾಣ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಆಗ್ರಹ

ಎಐಸಿಸಿ ಸಾಮಾಜಿಕ ಜಾಲತಾಣ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಯುವತಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳುವಂತೆ ಬಿಜೆಪಿ ಪೊಲೀಸರನ್ನು ಒತ್ತಾಯಿಸಿದೆ.
ಮೀನಾಕ್ಷಿ ಲೇಖಿ
ಮೀನಾಕ್ಷಿ ಲೇಖಿ
Updated on
ನವದೆಹಲಿ: ಎಐಸಿಸಿ ಸಾಮಾಜಿಕ ಜಾಲತಾಣ ಕಚೇರಿಯಲ್ಲಿ ನಡೆದಿದೆ ಎನ್ನಲಾದ  ಯುವತಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳುವಂತೆ ಬಿಜೆಪಿ ಪೊಲೀಸರನ್ನು ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ,  ಎಐಸಿಸಿ ಸಾಮಾಜಿಕ ಜಾಲತಾಣ ಕಚೇರಿಯಲ್ಲಿನ  ಸಹೋದ್ಯೋಗಿಯಿಂದ  ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ  ಮಾಜಿ ಸದಸ್ಯರು ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥರ ಅಧೀನದಲ್ಲಿ ಆರೋಪಿಗಳು ಕೆಲಸ ನಿರ್ವಹಿಸುತ್ತಾರೆ ಎಂದು ಹೇಳಿದರು.
ದೂರು ನೀಡಿರುವ ಯುವತಿಯ ಸುರಕ್ಷತೆ  ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಬೇಕು ಹಾಗೂ ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳುವಂತೆ ಅವರು ಆಗ್ರಹಿಸಿದರು. ಅನ್ಯಾಯಕ್ಕೊಳಗಾದ ಯುವತಿಗೆ ಸೂಕ್ತ ನ್ಯಾಯ ನೀಡುವ ನಿಟ್ಟಿನಲ್ಲಿ ದೆಹಲಿ ಪೊಲೀಸರು ಮುಂದಾಗುವಂತೆ ಅವರು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com