ಪ್ರತಿ ಕ್ವಿಂಟಾಲ್ ಭತ್ತಕ್ಕೆ ರೂ.200 ಬೆಂಬಲ ಬೆಲೆ ಏರಿಕೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಪ್ರತಿ ಕ್ವಿಂಟಾಲ್ ಭತ್ತಕ್ಕೆ ನೀಡಲಾಗುತ್ತಿರುವ ಕನಿಷ್ಠ ಬೆಂಬಲ ಬೆಲೆಯಲ್ಲಿ(ಎಂಎಸ್‌ಪಿ) 200 ರೂಪಾಯಿ ಏರಿಕೆ ಮಾಡಲು ಕೇಂದ್ರ ಸರ್ಕಾರದ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
ಭತ್ತ
ಭತ್ತ
ನವದೆಹಲಿ: ಪ್ರತಿ ಕ್ವಿಂಟಾಲ್ ಭತ್ತಕ್ಕೆ ನೀಡಲಾಗುತ್ತಿರುವ ಕನಿಷ್ಠ ಬೆಂಬಲ ಬೆಲೆಯಲ್ಲಿ(ಎಂಎಸ್‌ಪಿ) 200 ರೂಪಾಯಿ ಏರಿಕೆ ಮಾಡಲು ಕೇಂದ್ರ ಸರ್ಕಾರದ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. 
ಉತ್ಪಾದನಾ ವೆಚ್ಚಕ್ಕಿಂತ ಶೇ.50 ರಷ್ಟು ಹೆಚ್ಚು ಬೆಲೆಯನ್ನು ನಿಗದಿಪಡಿಸುವ ವಾಗ್ದಾನವನ್ನು ಈಡೇರಿಸುವ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಈ ನಿರ್ಣಯ ಕೈಗೊಂಡಿದೆ. 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಬೆಂಬಲ ಬೆಲೆ ಏರಿಕೆ ಮಹತ್ವ ಪಡೆದುಕೊಂಡಿದೆ. 2014 ರ ಲೋಕಸಭಾ ಚುನವಾಣೆಯಲ್ಲಿ ರೈತರಿಗೆ ಉತ್ಪಾದನಾ ವೆಚ್ಚಕ್ಕಿಂತ 1.5 ರಷ್ಟು ಹೆಚ್ಚಿನ ಬೆಂಬಲ ಬೆಲೆಯನ್ನು ನಿಗದಿಪಡಿಸುವುದಾಗಿ ಭರವಸೆ ನೀಡಿತ್ತು. ಈ ವರ್ಷ ಬಜೆಟ್ ನಲ್ಲಿ ಆ ಭರವಸೆಯನ್ನು ಈಡೇರಿಸಲಾಗಿತ್ತು. ಇದೀಗ 
ಪ್ರತಿ ಕ್ವಿಂಟಾಲ್ ಭತ್ತಕ್ಕೆ ಬೆಂಬಲ ಬೆಲೆ ಏರಿಕೆ ಮಾಡುವ ಮೂಲಕ ರೈತರನ್ನು ಸಂತಸಗೊಳಿಸುವ ನಿರ್ಧಾರ ಕೈಗೊಂಡಿದೆ. 
ಬೇಸಿಗೆಯಲ್ಲಿ ಬೆಳೆಯುವ ಸುಮಾರು 14 ವಿಧದ ಬೆಳೆಗಳಿಗೆ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಬೆಂಬಲ ಬೆಲೆಯನ್ನು ನಿಗದಿಪಡಿಸಿತ್ತು. ಭತ್ತಕ್ಕೆ ನೀಡಲಾಗುತ್ತಿದ್ದ ಬೆಂಬಲ ಬೆಲೆಯನ್ನು 200 ರೂಪಾಯಿ ಏರಿಕೆ ಮಾಡಿರುವುದರಿಂದ ಈಗ ಭತ್ತಕ್ಕೆ ನೀಡಲಾಗುವ ಕನಿಷ್ಠ ಬೆಂಬಲ ಬೆಲೆ 1,750 ಕ್ಕೆ ಏರಿಕೆಯಾಗಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com