ಮತ್ತೊಂದೆಡೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಿವೃತ್ತ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ ಕೂಡ ತೀರ್ಪು ಸ್ವಾಗತಿಸಿದ್ದು, ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿ ಸಂಬಂಧ ಉತ್ತಮವಾಗಿರಬೇಕು. ಇಬ್ಬರೂ ಒಗ್ಗೂಡಿ ಸಾಮರಸ್ಯದಿಂದ ಕೆಲಸ ಮಾಡಿದರೆ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.