ದೆಹಲಿ ಸರ್ಕಾರಕ್ಕೆ ತನಿಖಾ ಸಂಸ್ಥೆ ರಚಿಸುವ ಅಧಿಕಾರ ಇಲ್ಲ: ಅರುಣ್ ಜೇಟ್ಲಿ

ದೆಹಲಿ ಸರ್ಕಾರಕ್ಕೆ ಪೊಲೀಸ್ ಅಧಿಕಾರ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಹೀಗಾಗಿ ಆಪ್ ಸರ್ಕಾರಕ್ಕೆ....
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
ನವದೆಹಲಿ: ದೆಹಲಿ ಸರ್ಕಾರಕ್ಕೆ ಪೊಲೀಸ್ ಅಧಿಕಾರ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಹೀಗಾಗಿ ಆಪ್ ಸರ್ಕಾರಕ್ಕೆ ಈ ಹಿಂದೆ ನಡೆದ ಅಪರಾಧಗಳ ತನಿಖೆಗಾಗಿ ತನಿಖಾ ಸಂಸ್ಥೆ ಸ್ಥಾಪಿಸುವ ಅಧಿಕಾರ ಇಲ್ಲ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಹೇಳಿದ್ದಾರೆ.
ಎರಡನೆಯದಾಗಿ, ಕೇಂದ್ರ ಆಡಳಿತ ಪ್ರದೇಶದ ಆಡಳಿತಕ್ಕೆ ಸಂಬಂಧಿಸಿದ ವಿಚಾರದಲ್ಲಿ ದೆಹಲಿ ಸರ್ಕಾರದ ಪರವಾಗಿ ನಿರ್ಧಾರ ತೆಗೆದುಕೊಂಡಿರುವುದು "ಸಂಪೂರ್ಣವಾಗಿ ದೋಷಪೂರಿತವಾಗಿದೆ" ಎಂದು ಜೇಟ್ಲಿ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ನಿನ್ನೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದೊಂದಿಗೆ ಲೆಫ್ಟಿನೆಂಟ್ ಗವರ್ನರ್ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು ಎಂದು ಹೇಳುವ ಮೂಲಕ ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ಅಧಿಕಾರ ಜಟಾಪಟಿಗೆ ತೆರೆ ಎಳೆದಿತ್ತು.
ಸಂವಿಧಾನಾತ್ಮಕ ಅವಕಾಶವಿರದ ಹೊರತು ಲೆಫ್ಟಿನೆಂಟ್ ಗವರ್ನರ್ ಸ್ವತಂತ್ರವಾಗಿ ಅಧಿಕಾರ ನಡೆಸುವಂತಿಲ್ಲ ಮತ್ತು ಚುನಾಯಿತ ಸರ್ಕಾರದ ಪ್ರತಿರೋಧಿಯಾಗಿ ನಡೆದುಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com