ಪ್ರಿಯಾಂಕ ಚತುರ್ವೇದಿ ಮಗಳಿಗೆ ಟ್ವಿಟ್ಟರ್ ನಲ್ಲಿ ಅತ್ಯಾಚಾರ ಬೆದರಿಕೆ: ಆರೋಪಿ ಬಂಧನ

ಕಾಂಗ್ರೆಸ್ ವಕ್ತಾರೆ ಪ್ರಿಯಾಂಕ ಚತುರ್ವೇದಿ ಮಗಳಿಗೆ ಟ್ವಿಟ್ಟರ್ ನಲ್ಲಿ ಅತ್ಯಾಚಾರ ಬೆದರಿಕೆ ಹಾಕಿದ್ದನ 36 ವರ್ಷದ ವ್ಯಕ್ತಿಯೊಬ್ಬನನ್ನು ಮುಂಬೈ ಪೋಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ.
ಪ್ರಿಯಾಂಕ ಚತುರ್ವೇದಿ
ಪ್ರಿಯಾಂಕ ಚತುರ್ವೇದಿ
Updated on
ಮುಂಬೈ: ಕಾಂಗ್ರೆಸ್ ವಕ್ತಾರೆ ಪ್ರಿಯಾಂಕ ಚತುರ್ವೇದಿ ಮಗಳಿಗೆ ಟ್ವಿಟ್ಟರ್ ನಲ್ಲಿ ಅತ್ಯಾಚಾರ ಬೆದರಿಕೆ ಹಾಕಿದ್ದ 36 ವರ್ಷದ ವ್ಯಕ್ತಿಯೊಬ್ಬನನ್ನು ಮುಂಬೈ ಪೋಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ.
ಅಹಮದಾಬಾದ್ ಸಮೀಪದ ಬವಲಾ ಎನ್ನುವಲ್ಲಿ ಗಿರೀಶ್ ಮಹೇಶ್ವರಿ ಎನ್ನುವವನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೋಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆರೋಪಿಯನ್ನು ಮುಂಬೈಗೆ ಕರೆತರಲಾಗಿದ್ದು ದಿನದಂತ್ಯದ ವೇಳೆಗೆ ದಿನೋಶಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಚತುರ್ವೇದಿ ಅವರ ಹತ್ತು ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸುವ ಬೆದರಿಕೆ ಹಾಕಿದ್ದ ಆರೋಪಿ ಗಿರೀಶ್ ವಿರುದ್ಧ  ಪ್ರಕರಣ ದಾಖಲಿಸಿಕೊಂಡಿದ್ದಾಗಿ ಪೋಲೀಸರು ಹೇಳಿದ್ದಾರೆ.
ಮಧ್ಯ ಪ್ರದೇಶದಲ್ಲಿ ನಡೆದ ಏಳು ವರ್ಷದ ಬಾಲಕಿ ಮೇಲಿನ ಅತ್ಯಾಚಾರದ ಘಟನೆ ಬಳಿಕ ಚತುರ್ವೇದಿ ಟ್ವಿಟ್ಟರ್ ಅಕೌಂಟ್ ಗೆ ಕೆಲ ಬೆದರಿಕೆ ಸಂದೇಶಗಳೂ ಬರುತ್ತಿದೆ ಎಂದು ಅವರು ಆರೋಪಿಸಿದ್ದರು. 
ಆರೋಪಿ ಗಿರೀಶ್ ಬಂಧನದ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ಪ್ರಿಯಾಂಕ ಚತುರ್ವೇದಿ ಗೃಹ ಸಚಿವ ರಾಜ್ ನಾಥ್ ಸಿಂಗ್ ಸೇರಿದಂತೆ ಹಿರಿಯ ಪೋಲೀಸ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com