ಕೇಜ್ರಿವಾಲ್ ಗೆ ಕೆಲಸ ಮಾಡಲು ಅವಕಾಶ ಕೊಡಿ: ಕೇಂದ್ರಕ್ಕೆ ಶಿವಸೇನೆ ಆಗ್ರಹ

ಕೇಂದ್ರ ಸರ್ಕಾರ ದೆಹಲಿ ಆಮ್‌ ಆದ್ಮಿ ಪಕ್ಷದ ಸರ್ಕಾರದೊಂದಿಗೆ ಸಹಕರಿಸಬೇಕು ಮತ್ತು ಮುಖ್ಯಮಂತ್ರಿ...
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ
Updated on: 
ಮುಂಬೈ: ಕೇಂದ್ರ ಸರ್ಕಾರ ದೆಹಲಿ ಆಮ್‌ ಆದ್ಮಿ ಪಕ್ಷದ ಸರ್ಕಾರದೊಂದಿಗೆ ಸಹಕರಿಸಬೇಕು ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಶುಕ್ರವಾರ ಒತ್ತಾಯಿಸಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಕೇಜ್ರಿವಾಲ್‌ ಪರವಾಗಿ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಶಿವಸೇನೆ ಈ ಹೇಳಿಕೆ ನೀಡಿದೆ.
ಮನಸ್ಸು ಮಾಡಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ನಿಯಂತ್ರಿಸಬಹುದಾಗಿತ್ತು. ಆದರೆ ಅವರು ಹಾಗೆ ಮಾಡದಿದ್ದುದು ದುರದೃಷ್ಟಕರ ಎಂದು ಶಿವಸೇನೆ ಟೀಕಿಸಿದೆ.
ಕನಿಷ್ಠ ಪಕ್ಷ ಈಗಲಾದರೂ ಹಗ್ಗಜಗ್ಗಾಟಕ್ಕೆ ತೆರೆ ಎಳೆದು ಕೇಜ್ರಿವಾಲ್ ಅವರಿಗೆ ಕೆಲಸ ಮಾಡಲು ಬಿಡಿ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಆಗ್ರಹಿಸಿದೆ.
ನಿನ್ನೆಯಷ್ಟೇ ಮಹತ್ವದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ಚುನಾಯಿತ ಸರ್ಕಾರದ ಸಲಹೆಗಳಿಗೆ ಬದ್ಧವಾಗಿರಬೇಕು ಮತ್ತು ಚುನಾಯಿತ ಸರ್ಕಾರದ ಪ್ರತಿರೋಧಿಯಾಗಿ ನಡೆದುಕೊಳ್ಳುವಂತಿಲ್ಲ ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com