ಒಂದು ವರ್ಷದ ನಂತರ ಜೂನ್ 29ರಂದು ಜಾರ್ಖಂಡ್ ಹೈ ಕೋರ್ಟ್ 8 ಆರೋಪಿಗಳ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿತ್ತು. ಜೈಲಿನಿಂದ ಜಾಮೀನಿನ ಬಿಡುಗಡೆಯಾದ ಇವರೆಲ್ಲರೂ ಸ್ಥಳಿಯ ಬಿಜೆಪಿ ನಾಯಕರೊಬ್ಬರ ಜತೆ ರಾಂಚಿಯ ಜಯಂತ್ ಸಿನ್ಹಾ ಅವರ ನಿವಾಸಕ್ಕೆ ಭೇಟಿ ಕೊಟ್ಟಾಗ ಸಚಿವರು ಎಲ್ಲರನ್ನೂ ಹಾರ ಹಾಕಿ ಸ್ವಾಗತಿಸಿದ್ದಾರೆ. ಈ ಕುರಿತ ಭಾವಚಿತ್ರಗಳು ಇದೀಗ ವೈರಲ್ ಆಗುತ್ತಿದ್ದು, ಈ ವಿಚಾರ ಮಾಧ್ಯಮಗಳಲ್ಲಿ ಸುದ್ದಿಗೆ ಗ್ರಾಸವಾಗುತ್ತಿದ್ದಂತೆಯೇ ಜಯಂತ್ ಸಿನ್ಹಾಟ್ವೀಟ್ ಮೂಲಕ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಸಚಿವರು ಸರಣಿ ಟ್ವೀಟ್‌ಗಳ ಮೂಲಕ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂದು ಸಮಜಾಯಿಷಿ ನೀಡಿದ್ದಾರೆ.