ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ: ಶಶಿ ತರೂರ್'ಗೆ ಜಾಮೀನು ಮಂಜೂರು

ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ...
ಸುನಂದಾ ಪುಷ್ಕರ್ ಮತ್ತು ಶಶಿ ತರೂರ್
ಸುನಂದಾ ಪುಷ್ಕರ್ ಮತ್ತು ಶಶಿ ತರೂರ್
ನವದೆಹಲಿ; ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. 
ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ಸಲ್ಲಿಸಿದ್ದ ದೋಷಾರೋಪಣಾ ಪಟ್ಟಿಯ ಆಧಾರದ ಮೇಲೆ ಈ ಹಿಂದೆ ನ್ಯಾಯಾಲಯ ಶಶಿ ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಇದರಂತೆ ಜುಲೈ.5 ರಂದು ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿತ್ತು. 
ಬಳಿಕ ನಿರೀಕ್ಷಣಾ ಜಾಮೀನು ಕೋರಿ ಶಶಿ ತರೂರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದರಂತೆ ಗುರುವಾರ ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. 
ಇಂದು ನಡೆದ ವಿಚಾರಣೆಗೆ ಹಾಜರಾದ ಶಶಿ ತರೂರ್ ಅವರು ಜು.5 ರಂದು ಸೆಷನ್ಸ್ ನ್ಯಾಯಾಲಯ ತಮಗೆ ಜಾಮೀನು ಮಂಜೂರು ಮಾಡಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 
ಬಳಿಕ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು ಶೂರಿಟಿಗಾಗಿ ರೂ.1 ಲಕ್ಷ ಬಾಂಡ್ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೆ, ಅನುಮತಿ ಇಲ್ಲದೆಯೇ ದೇಶ ಬಿಟ್ಟು ಹೋಗದಂತೆ ಹಾಗೂ ಸಾಕ್ಷ್ಾದನಗಳನ್ನು ನಾಶಮಾಡುವ ಅಥವಾ ಸಾಕ್ಷ್ಯಾಧಾರಿಗಳಿಗೆ ಬೆದರಿಕೆಯೊಡ್ಡುವ ಯಾವುದೇ ಪ್ರಯತ್ನಗಳನ್ನು ಮಾಡದಂತೆಯೂ ಸೂಚನೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com