ರಾಜಸ್ಥಾನ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ, 12 ಸಾವು, 21 ಮಂದಿಗೆ ಗಾಯ

ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 12 ಮಂದಿ ಸತ್ತು 21 ಜನ ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿ ನಡೆದಿದೆ.
ರಾಜಸ್ಥಾನ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ, 12 ಸಾವು, 21 ಮಂದಿಗೆ ಗಾಯ
ರಾಜಸ್ಥಾನ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ, 12 ಸಾವು, 21 ಮಂದಿಗೆ ಗಾಯ
ಅಜ್ಮೀರ್ (ರಾಜಸ್ಥಾನ): ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 12 ಮಂದಿ  ಸತ್ತು 21 ಜನ ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿ ನಡೆದಿದೆ.
ಭಾನುವಾರ ಬೆಳಿಗ್ಗೆ ನಡಿದ ಈ ಭೀಕರ ಅಪಘಾತದಲ್ಲಿ ಗಾಯಗೊಂಡವರನ್ನು ಜೆಎಲ್‍ಎನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವು ಜನರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಜ್ಮೀರ್‌ನ ತಬಿಜಿ ಗ್ರಾಮದ ಬಳಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್ ಹಾಗು ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಾಟ ನಡೆಸಿದ್ದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದಿಂದ ಬಸ್ ನ ಒಂದು ಭಾಗ ಸಂಪೂರ್ಣ ಜಖಂ ಆಗಿದ್ದು 12 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳೀಯರು ಘಟನೆ ಸಂಬಂಧ ಪೋಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿದ ಪೋಲೀಸರು ಪರಿಶೀಲನೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com