70 ವರ್ಷಗಳ ಕಾಲ ಪ್ರಜಾಪ್ರಭುತ್ವ ರಕ್ಷಿಸಿದ್ದಕ್ಕೆ, ಒಬ್ಬ 'ಚಾಯ್'ವಾಲಾ' ದೇಶದ ಪ್ರಧಾನಿಯಾಗಿದ್ದು: ಕಾಂಗ್ರೆಸ್

ದೇಶದಲ್ಲಿ 70 ವರ್ಷಗಳ ಕಾಲ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಿದ್ದಕ್ಕೇ, ಒಬ್ಬ 'ಚಾಯ್'ವಾಲಾ' ದೇಶದ ಪ್ರಧಾನಮಂತ್ರಿಯಾಗಿದ್ದು ಎಂದು ಹೇಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್...
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ದೇಶದಲ್ಲಿ 70 ವರ್ಷಗಳ ಕಾಲ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಿದ್ದಕ್ಕೇ, ಒಬ್ಬ 'ಚಾಯ್'ವಾಲಾ' ದೇಶದ ಪ್ರಧಾನಮಂತ್ರಿಯಾಗಿದ್ದು ಎಂದು ಹೇಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 
ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. 
ಪ್ರತಿಯೊಂದು ಕಾರ್ಯಕ್ರಮದಲ್ಲೂ, ವೇದಿಕೆಯಲ್ಲಿ ಮೋದಿಯವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. 70 ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಏನು ಮಾಡಿತು ಎಂದು ಪ್ರಶ್ನಿಸುತ್ತಾರೆ. 70 ವರ್ಷಗಳ ಕಾಲ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಿದ್ದಕ್ಕೇ ಇಂದು ಒಬ್ಬ 'ಚಾಯ್'ವಾಲ್' ದೇಶದ ಪ್ರಧಾನಮಂತ್ರಿಯಾಗಲು ಸಾಧ್ಯವಾಯಿತು ಎಂದು ಹೇಳಿದ್ದಾರೆ. 
43 ವರ್ಷಗಳ ಹಿಂದಿನ ತುರ್ತು ಪರಿಸ್ಥಿತಿ ಕುರಿತಂತೆ ಪ್ರಧಾನಿ ಮೋದಿ ಮಾತನಾಡುತ್ತಿದ್ದಾರೆ. 2014ರಲ್ಲಿ ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಎಂದೆ ಎಂದು ತಿಳಿಸಿದ್ದಾರೆ. 
43 ವರ್ಷಗಳ ಹಿಂದಿನ ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡುತ್ತಿರುವ ಮೋದಿಯವರು, ಕಳೆದ ನಾಲ್ಕು ವರ್ಷಗಳಿಂದ ದೇಶದಲ್ಲಿರುವ ಅಘೋಷಿತ ತುರ್ತು ಪರಿಸ್ಥಿತಿ ಬಗ್ಗೆ ಏನು ಹೇಳುತ್ತಾರೆ? ದೇಶದಲ್ಲಿ ಇಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೃಷಿ ಯೋಜನೆಗಳು ವಿಫಲಗೊಳ್ಳುತ್ತಿವೆ. ರೈತರಿಗೆ ಹೊಸ ಸಾಲಗಳು ದೊರೆಯುತ್ತಿಲ್ಲ. ವ್ಯಾಪಾರ ವಹಿವಾಟುಗಳು ಕುಗ್ಗುತ್ತಿವೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com