ಇನ್ನು ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಚೌದರಿ ಅವರು, ಗಿರಿರಾಜ್ ಸಿಂಗ್ ಅವರು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಅವರ ಕುಟುಂಬಸ್ಥರು ಜೈಲಿನಲ್ಲಿದ್ದು, ಅವರ ಕ್ಷೇತ್ರದ ಮುಖಂಡರು ಅವರನ್ನು ಭೇಟಿ ಮಾಡಿದ್ದಾರೆ ಅಷ್ಟೇ. ಇದಕ್ಕೆ ರಾಜಕೀಯ ಬಣ್ಣ ಬಳಿಯುವ ಅವಶ್ಯಕತೆ ಇಲ್ಲ. ಗಿರಿರಾಜ್ ಸಿಂಗ್ ತಮ್ಮ ಕ್ಷೇತ್ರ ಜನರನ್ನು ಮಾತ್ರ ಬೇಟಿಯಾಗಿದ್ದಾರೆ ಎಂದು ಹೇಳಿದ್ದಾರೆ.