ಹತ್ತರ ಬಾಲೆಯ ಮೇಲೆ ಅತ್ಯಾಚಾರ ಎಸಗಿದ 99 ವರ್ಷದ ಮುದುಕ!

99 ವರ್ಷದ ನಿವೃತ್ತ ಪ್ರಾಂಶುಪಾಲನೋರ್ವ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಧಾರುಣ ಘಟನೆ ಚೆನ್ನೈನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಚೆನ್ನೈ: 99 ವರ್ಷದ ನಿವೃತ್ತ ಪ್ರಾಂಶುಪಾಲನೋರ್ವ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಧಾರುಣ ಘಟನೆ ಚೆನ್ನೈನಲ್ಲಿ ನಡೆದಿದೆ.
ಚೆನ್ನೈನ ಅವದಿ ಪ್ರದೇಶದ ನಿವಾಸಿಯಾದ 99 ಹರೆಯದ ನಿವೃತ್ತ ಮುಖ್ಯೋಪಧ್ಯಾಯನನ್ನು ಹತ್ತರ ಬಾಲೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಚೈನ್ನೈ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಮುದುಕ ತನ್ನ ಮನೆಯ ಸಮೀಪ ಐದು ಮನೆಗಳನ್ನು ನಿರ್ಮಿಸಿ ಬಾಡಿಗೆಗೆ ನೀಡಿದ್ದ. ಈ ಬಾಲಕಿಯ ಕುಟುಂಬ ಈ ಮನೆಯೊಂದರಲ್ಲಿ ಬಾಡಿಗೆಗೆ ವಾಸವಾಗಿತ್ತು. ಬಾಲಕಿಯ ಪೋಷಕರು ಇಲ್ಲದ ವೇಳೆ ಮುದುಕ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಬಳಿಕ ಬಾಲಕಿ ತನ್ನ ಪೋಷಕರ ಬಳಿ ಹೊಟ್ಟೆ ನೋವಾಗುತ್ತದೆ ಎಂದು ಹೇಳಿದ ಬಳಿಕ ಪೋಷಕರು ಆಕೆಯನ್ನು ವೈದ್ಯರ ಬಳಿ ಕರೆದೊಯ್ದಿದ್ದಾರೆ. ಈ ವೇಳೆ ಮಗಳ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಪೋಷಕರಿಗೆ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 
ಪ್ರಸ್ತುತ ಬಾಲಕಿಯ ಹೇಳಿಕೆಯನ್ನು ಆಧರಿಸಿ ಆಕೆಯ ತಂದೆ ಮುದುಕ ಪರಶುರಾಮ್ ನನ್ನು ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಪರಶುರಾಮನನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com