ಬಿಹಾರ: ಅಶ್ಲೀಲ ವಿಡಿಯೋ ವೀಕ್ಷಿಸುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸುತ್ತಿದ್ದ ಪ್ರಾಂಶುಪಾಲ, ಶಿಕ್ಷಕನ ಬಂಧನ

ಅಶ್ಲೀಲ ವೀಡಿಯೊ ವೀಕ್ಷಿಸುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ದರ್ಭಾಂಗ್: ಅಶ್ಲೀಲ ವಿಡಿಯೋ ವೀಕ್ಷಿಸುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ಮತ್ತು ಶಿಕ್ಷಕನನ್ನು ಮಂಗಳವಾರ ಬಂಧಿಸಲಾಗಿದೆ.
ಬಿಹಾರದ ದರ್ಭಾಂಗ್ ನ ಲಾಲ್ ಬಾಗ್ ಸರ್ಕಾರಿ ಶಾಲೆಯ ಪ್ರಾಂಶುಪಾಲ ಸುಜಿತ್ ಕುಮಾರ್ ಮಿಶ್ರಾ ಮತ್ತು ಶಿಕ್ಷಕ ಆನಂದ್ ಶಂಕರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ವಿದ್ಯಾರ್ಥಿನಿಯರ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರಾಂಶುಪಾಲರ ಮತ್ತು ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಎಫ್ಐಆರ್ ನಲ್ಲಿ ಶಾಲಾ ಕಾರ್ಯದರ್ಶಿಯ ಹೆಸರು ಸಹ ಇದೆ.
ಪ್ರಾಂಶುಪಾಲ ಮತ್ತು ಶಿಕ್ಷಕನ ಬಂಧನ ನಂತರ ಶಾಲೆಯನ್ನು ಏಳು ದಿನಗಳ ಕಾಲ ಬಂದ್ ಮಾಡಲಾಗಿದ್ದು, ಆರೋಪಿಗಳ ವಿರುದ್ಧ ತನಿಖೆಗೆ ಸಮಿತಿ ರಚಿಸಿರುವುದಾಗಿ ಜಿಲ್ಲಾ ಶಿಕ್ಷಣ ಅಧಿಕಾರಿ ಡಾ.ಮಹೇಶ್ ಪ್ರಸಾದ್ ಸಿಂಗ್ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com