ಗುರುಗ್ರಾಮ್: ಗುರುಗ್ರಾಮದ ಸೆಕ್ಟರ್ - 5ರಲ್ಲಿ ಪಿಜಿಯೊಂದರಲ್ಲಿ ವಾಸಿಸುತ್ತಿದ್ದ ಇಬ್ಬರು ನರ್ಸ್ ಗಳ ವಿಡಿಯೋ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಮಂಗಳವಾರ ಬಂಧಿಸಲಾಗಿದೆ.
ಜುಲೈ 2 ಮತ್ತು ಜುಲೈ 3ರಂದು ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮ ರೂಮ್ ನಲ್ಲಿ ರಾತ್ರಿ ಮಲಗಿದ್ದ ವೇಳೆ ವ್ಯಕ್ತಿಯೊಬ್ಬ ಕಿಟಕಿಯಿಂದ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಆ ದುಷ್ಕರ್ಮಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ 28 ವರ್ಷದ ಓರ್ವ ನರ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ.
ವಿಡಿಯೋ ಮಾಡಿದ ವ್ಯಕ್ತಿ ಮಹಿಳೆ ಎಂದು ಹೇಳಿಕೊಂಡು ಅದೇ ಪಿಜಿಯಲ್ಲಿ ವಾಸಿಸುತ್ತಿದ್ದು, ಈ ಕುರಿತು ಪಿಜಿಯ ಮಾಲೀಕರ ಗಮನಕ್ಕೆ ತಂದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ನರ್ಸ್ ದೂರಿದ್ದಾರೆ.
ನರ್ಸ್ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದೇವೆ ಮತ್ತು ಅಪರಾಧಕ್ಕೆ ಪಿತೂರಿ ನೀಡಿದ ಆರೋಪದ ಮೇಲೆ ಪಿಜಿ ಮಾಲೀಕರ ವಿರುದ್ಧವೂ ಕೇಸ್ ದಾಖಲಿಸಲಾಗಿದೆ ಎಂದು ಗುರುಗ್ರಾಮ್ ಪೊಲೀಸ್ ಪಿಆರ್ ಒ ಸುಭಾಶ್ ಬೋಕನ್ ಅವರು ಹೇಳಿದ್ದಾರೆ.