ದೆಹಲಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ರಾಜಧಾನಿ ದೆಹಲಿಯ ನರೆಲಾ ಪ್ರದೇಶದ ಸರ್ಕಾರಿ ಶಾಲೆಯ ಸುಮಾರು 25 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಜಧಾನಿ ದೆಹಲಿಯ ನರೆಲಾ ಪ್ರದೇಶದ ಸರ್ಕಾರಿ ಶಾಲೆಯ ಸುಮಾರು 25 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಸೇವಿಸಿದ 26 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಬಗ್ಗೆ ಮಾಹಿತಿ ತಿಳಿದು ಅವರೆಲ್ಲರನ್ನೂ ಸತ್ಯವಾದಿ ರಾಜ ಹರೀಶ್ ಚಂದ್ರ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಹೊಟ್ಟೆನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿ ಈಗ ಸುಧಾರಿಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

 ರಾಜಧಾನಿಯಲ್ಲಿ ವಾರದೊಳಗೆ ನಡೆಯುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಶನಿವಾರ ಪಶ್ಟಿಮ ದೆಹಲಿಯ ಕಿಚ್ಡಿಪುರದಲ್ಲಿನ ಸರ್ಕಾರಿ ಶಾಲೆಯಲ್ಲಿನ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಇಬ್ಬರು ಬಾಲಕಿಯರು ಅಸ್ವಸ್ಥಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com