ಲೆಫ್ಟಿನೆಂಟ್ ಗವರ್ನರ್ ರಿಂದ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ: ಮನೀಷ್ ಸಿಸೋಡಿಯಾ

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದ್ದು, ಸರ್ಕಾರದ ಗಮನಕ್ಕೆ ತರದೇ ನೇಮಕಾತಿ ಮಾಡಿದ್ದಾರೆ ಎಂದು ದೆಹಲಿ ಸಚಿವ ಮನೀಷ್ ಸಿಸೋಡಿಯಾ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದ್ದು, ಸರ್ಕಾರದ ಗಮನಕ್ಕೆ ತರದೇ ನೇಮಕಾತಿ ಮಾಡಿದ್ದಾರೆ ಎಂದು ದೆಹಲಿ ಸಚಿವ ಮನೀಷ್ ಸಿಸೋಡಿಯಾ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಹೊರತಾಗಿಯೂ ಲೆಫ್ಟಿನೆಂಟ್ ಗವರ್ನರ್ ಶಿಕ್ಷಣ ಇಲಾಖೆಯ ನಿರ್ದೇಶಕರುಗಳನ್ನು ನೇಮಕ ಮಾಡಿರುವುದು ಅಕ್ರಮ. ರಾಜ್ಯದಲ್ಲಿ ಅನಿಲ್ ಬೈಜಲ್ ಅವರು ದಾದಾಗಿರಿಯ ಆಡಳಿತ ನಡೆಸುತ್ತಿದ್ದು, ಜನರು ಆರಿಸಿದ ಸರ್ಕಾರಕ್ಕೆ ಲೆಫ್ಟಿನೆಂಟ್ ಗವರ್ನರ್ ಅಗೌರವ ತೋರಿದ್ದಾರೆ. ಒಂದು ಪ್ರಮುಖ ಸ್ಥಾನಕ್ಕೆ ಸರ್ಕಾರದೊಂದಿಗೆ ಚರ್ಚಿಸದೇ ಲೆಫ್ಟಿನೆಂಟ್ ಗವರ್ನರ್ ನೇಮಕ ಮಾಡಿರುವುದು ಸರಿಯಲ್ಲ. ಸರ್ಕಾರ ಶಿಕ್ಷಣ ಇಲಾಖೆಗೆ ಶೇ.26ರಷ್ಟು ಅನುದಾನ ನೀಡುತ್ತಿದೆ. ಹೀಗಿದ್ದು ಬೈಜಲ್ ಅವರ ನಿರ್ಧಾರ ಏಕಪಕ್ಷೀಯವಾದದ್ದು. ಇದು ಸ್ಪಷ್ಟವಾಗಿ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.
ಕಳೆದ ವಾರವಷ್ಟೇ ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ತಿಕ್ಕಾಟಕ್ಕೆ ತೆರೆ ಎಳೆದಿದ್ದ ಸುಪ್ರೀಂ ಕೋರ್ಟ್, ಸರ್ಕಾರ ಮತ್ತು ಗವರ್ನರ್ ಕಚೇರಿ ಸಾಮರಸ್ಯ ಸೌಹಾರ್ಧಸಂಬಂಧ ಹೊಂದಿರಬೇಕು. ಪರಸ್ಪರ ಒಗ್ಗೂಡಿ ನಿರ್ಧಾರ ಕೈಗೊಳ್ಳಬೇಕು. ಅಂತೆಯೇ ದೆಹಲಿಗೆ ಸಾಮಾನ್ಯ ರಾಜ್ಯ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com